ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಂಗಳೂರಿನ ತಮ್ಮ ನಿವಾಸದಲ್ಲಿ ಕಾಂಗ್ರೆಸ್ ನಾಯಕರು, ಪಕ್ಷದ ಕಾರ್ಯಕರ್ತರಿಂದ ಶುಭಾಶಯ ಸ್ವೀಕರಿಸಿದ್ದಾರೆ. ಇದಾದ ಬಳಿಕ ನಿವಾಸದಲ್ಲಿಯೇ ಅವರು ಪತ್ರಿಕಾಗೋಷ್ಠಿ ನಡೆಸಿದ್ದಾರೆ.
ಇದೀಗ ಅವರು ತಾವು ಅಪಾರವಾಗಿ ನಂಬುವ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆ ಅಜ್ಜಯ್ಯನ ಮಠಕ್ಕೆ ಕುಟುಂಬ ಸದಸ್ಯರೊಂದಿಗೆ ತೆರಳಿದ್ದು, ಅಲ್ಲಿ ದರ್ಶನ ಪಡೆಯಲಿದ್ದಾರೆ.
ಇದಾದ ಬಳಿಕ ನವದೆಹಲಿಗೆ ತೆರಳುವ ಡಿ.ಕೆ. ಶಿವಕುಮಾರ್ ಪಕ್ಷದ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ಪಕ್ಷದ ವರಿಷ್ಠರು ಇಬ್ಬರು ನಾಯಕರ ಜೊತೆ ಚರ್ಚೆ ನಡೆಸಿದ ಬಳಿಕ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ಘೋಷಿಸಲಿದ್ದಾರೆ ಎಂದು ತಿಳಿದುಬಂದಿದೆ.