HomeKarnatakaBIG BREAKING: ಸಿಎಂ ರೇಸ್ ನಿಂದ ಡಿಕೆಶಿ ಔಟ್: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ…?

BIG BREAKING: ಸಿಎಂ ರೇಸ್ ನಿಂದ ಡಿಕೆಶಿ ಔಟ್: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ…?

ನವದೆಹಲಿ: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ರೇಸ್ ನಿಂದ ಡಿ.ಕೆ. ಶಿವಕುಮಾರ್ ಹೊರಗುಳಿದಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ.

ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂದು ಕಾಂಗ್ರೆಸ್ ಹೈಕಮಾಂಡ್ ಘೋಷಣೆ ಮಾಡಲಿದೆ ಎಂದು ಮೂಲಗಳು ತಿಳಿಸಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ನಡುವೆ ಮುಖ್ಯಮಂತ್ರಿ ಹುದ್ದೆಗೆ ತೀವ್ರ ಪೈಪೋಟಿ ಇತ್ತು.

ನಿನ್ನೆ ನಡೆದ ಶಾಸಕಾಂಗ ಸಭೆಯಲ್ಲಿ ಸಿಎಂ ಆಯ್ಕೆ ನಿರ್ಧಾರವನ್ನು ಹೈಕಮಾಂಡ್ ಗೆ ವಹಿಸಲಾಗಿತ್ತು. ಹೈಕಮಾಂಡ್ ಸೂಚನೆ ಮೇರೆಗೆ ಇಂದು ಸಿದ್ದರಾಮಯ್ಯ ದೆಹಲಿಗೆ ತೆರಳಿ ಸಮಾಲೋಚನೆ ನಡೆಸಿದ್ದಾರೆ. ಅನಾರೋಗ್ಯದ ಕಾರಣ ಡಿ.ಕೆ. ಶಿವಕುಮಾರ್ ದೆಹಲಿ ಭೇಟಿಯನ್ನು ಕೊನೆಗಳಿಗೆಯಲ್ಲಿ ರದ್ದುಪಡಿಸಿದ್ದಾರೆ.

ಅವರು ಸಿಎಂ ಹುದ್ದೆ ಸಿಗದ ಬೇಸರದಿಂದ ಅವರು ದೆಹಲಿ ಭೇಟಿ ರದ್ದು ಮಾಡಿದ್ದಾರೆ ಎಂದು ಹೇಳಲಾಗಿದೆ. ಕಾಂಗ್ರೆಸ್ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಹುದ್ದೆಗೆ ಪರಿಗಣಿಸಿದ್ದು, ಸಿದ್ದರಾಮಯ್ಯ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular