HomeKarnatakaಈಜಲು ಹೋದಾಗಲೇ ದುರಂತ: ಕೆಸರಲ್ಲಿ ಸಿಲುಕಿ ಇಬ್ಬರು ಸಾವು

ಈಜಲು ಹೋದಾಗಲೇ ದುರಂತ: ಕೆಸರಲ್ಲಿ ಸಿಲುಕಿ ಇಬ್ಬರು ಸಾವು

ರಾಯಚೂರು: ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಸಹೋದರರು ನೀರು ಪಾಲಾಗಿದ್ದಾರೆ. ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ದಡೇಸುಗೂರು ಗ್ರಾಮದಲ್ಲಿ ಘಟನೆ ನಡೆದಿದೆ.

18 ವರ್ಷದ ಅಮರ್ ಮತ್ತು 16 ವರ್ಷದ ಮಲ್ಲಿಕಾರ್ಜುನ್ ಮೃತಪಟ್ಟವರು ಎಂದು ಹೇಳಲಾಗಿದೆ. ಬಿಸಿಲ ಬೇಗೆ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಮಧ್ಯಾಹ್ನ ದಡೇಸುಗೂರು ಸಮೀಪ ತುಂಗಭದ್ರಾ ನದಿಯಲ್ಲಿ ಈಜಲು ಹೋಗಿದ್ದ ವೇಳೆ ಕೆಸರಿನಲ್ಲಿ ಸಿಲುಕಿಕೊಂಡಿದ್ದಾರೆ. ಕೆಸರಿನಿಂದ ಹೊರಗೆ ಬರಲಾಗದೆ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular