HomeKarnatakaBIG NEWS: ನೂರಕ್ಕೆ ನೂರರಷ್ಟು ಸಿದ್ದರಾಮಯ್ಯ ಸಿಎಂ ಆಗ್ತಾರೆ; ಶಾಸಕ ಕೆ.ಎನ್.ರಾಜಣ್ಣ

BIG NEWS: ನೂರಕ್ಕೆ ನೂರರಷ್ಟು ಸಿದ್ದರಾಮಯ್ಯ ಸಿಎಂ ಆಗ್ತಾರೆ; ಶಾಸಕ ಕೆ.ಎನ್.ರಾಜಣ್ಣ

ತುಮಕೂರು: ನೂರಕ್ಕೆ ನೂರರಷ್ಟು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗ್ತಾರೆ ಎಂದು ಶಾಸಕ ಕೆ.ಎನ್.ರಾಜಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಕೆ.ಎನ್.ರಾಜಣ್ಣ, ಮೇ 18ರಂದು ನೂತನ ಸಿಎಂ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಹೈಕಮಾಂಡ್ ಒಲವು ಕೂಡ ಸಿದ್ದರಾಮಯ್ಯ ಪರವಾಗಿಯೇ ಇದೆ. ಡಿ.ಕೆ.ಶಿವಕುಮಾರ್ ಕೂಡ ಸಹಕಾರ ಕೊಡುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಸಿಎಂ ವಿಚಾರ ಇಂದು ಫೈನಲ್ ಆಗಲೇಬೇಕು. ಸಧ್ಯಕ್ಕೆ ಸಿದ್ದರಾಮಯ್ಯ ಒಬ್ಬರೇ ಪ್ರಮಾಣವಚನ ಸ್ವೀಕರಿಸಬಹುದು. ಸಚಿವ ಸಂಪುಟ ಸ್ವಲ್ಪ ತಡವಾಗಬಹುದು. ಮೊದಲ ಸಂಪುಟದಲ್ಲೇ ಅನ್ನಭಾಗ್ಯ ಯೋಜನೆ ಜಾರಿ ಮಾಡುತ್ತೇವೆ. ನಾನು ಕೂಡ ಸಚಿವನಾಗಬೇಕು. ಸಹಕಾರ ಸಚಿವನಾಗಬೇಕು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular