HomeKarnatakaವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಶಾಕ್: ವೇತನ ಪರಿಷ್ಕರಣೆ ಮತ್ತಷ್ಟು ವಿಳಂಬ; ಆಯೋಗ ಅವಧಿ...

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ಶಾಕ್: ವೇತನ ಪರಿಷ್ಕರಣೆ ಮತ್ತಷ್ಟು ವಿಳಂಬ; ಆಯೋಗ ಅವಧಿ 6 ತಿಂಗಳು ವಿಸ್ತರಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿ ಪರಿಷ್ಕರಣೆ ಮತ್ತು ನೂತನ ವೇತನ ರಚನೆ ಮೊದಲಾದ ಅಂಶಗಳನ್ನು ರೂಪಿಸಲು ರಚಿಸಲಾಗಿರುವ 7ನೇ ವೇತನ ಆಯೋಗ ವರದಿ ಸಲ್ಲಿಸಲು ನೀಡಿದ್ದ ಅವಧಿಯನ್ನು ಸರ್ಕಾರ ಇನ್ನೂ 6 ತಿಂಗಳು ವಿಸ್ತರಿಸಿದೆ.

ನಿವೃತ್ತ ಐಎಎಸ್ ಅಧಿಕಾರಿ ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ ಬಿಜೆಪಿ ಸರ್ಕಾರ 7ನೇ ವೇತನ ಆಯೋಗ ರಚಿಸಿ. 2022ರ ಮೇ 19ರಿಂದ ಮುಂದಿನ ಆರು ತಿಂಗಳಲ್ಲಿ ವರದಿ ನೀಡಲು ಸೂಚಿಸಲಾಗಿತ್ತು. ಈಗ ರಾಜ್ಯಪಾಲರ ಆದೇಶದಂತೆ ಆಯೋಗಕ್ಕೆ ವರದಿ ಸಲ್ಲಿಸಲು ನೀಡಿದ ಅವಧಿಯನ್ನು ಮೇ 19 ರಿಂದ ಮುಂದಿನ ಇನ್ನೂ ಆರು ತಿಂಗಳವರೆಗೆ ವಿಸ್ತರಿಸಿರುವುದಾಗಿ ಆರ್ಥಿಕ ಇಲಾಖೆ ಸರ್ಕಾರದ ಉಪ ಕಾರ್ಯದರ್ಶಿ ಆದೇಶ ಆದೇಶದಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular