HomeIndiaಮೆಟ್ರೋದಲ್ಲೇ ಮಾನಗೇಡಿ ಕೃತ್ಯ: ಹಸ್ತಮೈಥುನ ಮಾಡಿಕೊಂಡ ಕಾಮುಕನ ಬಂಧನಕ್ಕೆ ಜನರ ನೆರವು ಕೋರಿದ ಪೊಲೀಸರು

ಮೆಟ್ರೋದಲ್ಲೇ ಮಾನಗೇಡಿ ಕೃತ್ಯ: ಹಸ್ತಮೈಥುನ ಮಾಡಿಕೊಂಡ ಕಾಮುಕನ ಬಂಧನಕ್ಕೆ ಜನರ ನೆರವು ಕೋರಿದ ಪೊಲೀಸರು

ನವದೆಹಲಿ: ದೆಹಲಿ ಮೆಟ್ರೋ ಕೋಚ್‌ ನಲ್ಲಿ ಸೀಟ್ ನಲ್ಲಿ ಕುಳಿತು ಸಾರ್ವಜನಿಕವಾಗಿ ಹಸ್ತಮೈಥುನ ಮಾಡಿಕೊಳ್ಳುತ್ತಿರುವ ವ್ಯಕ್ತಿಯನ್ನು ಗುರುತಿಸಲು ಸಹಾಯ ಮಾಡುವಂತೆ ಪೊಲೀಸರು ಜನರನ್ನು ಕೋರಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಸ್ತಮೈಥುನ ಮಾಡಿಕೊಳ್ಳುತ್ತಿರುವ ವ್ಯಕ್ತಿಯನ್ನು ಗುರುತಿಸಲು ಡಿಸಿಪಿ ಮೆಟ್ರೋ ಸಾರ್ವಜನಿಕರ ಸಹಾಯವನ್ನು ಕೋರಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆತನ ಫೋಟೋ ಪ್ರಕಟಿಸಿ, ಬೇಕಾಗಿದ್ದಾನೆ, ೀತನ ಗುರುತು ಬಲ್ಲವರು ದಯವಿಟ್ಟು SHO IGIA ಮೆಟ್ರೋಗೆ 8750871326 ಅಥವಾ 1511(ನಿಯಂತ್ರಣ ಕೊಠಡಿ) ಅಥವಾ 112(ಪೊಲೀಸ್ ಸಹಾಯವಾಣಿ) ಗೆ ತಿಳಿಸಿ. ಮಾಹಿತಿ ನೀಡುವವರ ಗುರುತನ್ನು ಗೌಪ್ಯವಾಗಿಡಲಾಗುವುದು ಎಂದು ಮೆಟ್ರೋ ಡಿಸಿಪಿ ಟ್ವೀಟ್ ಮಾಡಿದ್ದಾರೆ.

ಮೆಟ್ರೋದಲ್ಲಿ ಪ್ರಯಾಣಿಸುವಾಗ ವ್ಯಕ್ತಿ ಅಶ್ಲೀಲ ಕೃತ್ಯದಲ್ಲಿ ತೊಡಗಿರುವುದನ್ನು ವಿಡಿಯೋ ತೋರಿಸಿದೆ. ಮತ್ತೊಬ್ಬ ಪ್ರಯಾಣಿಕರಿಂದ ರೆಕಾರ್ಡ್ ಮಾಡಲಾಗಿದೆ. ಪೊಲೀಸರು ಸ್ವಯಂ ಪ್ರೇರಿತ ಕ್ರಮ ಕೈಗೊಂಡಿದ್ದಾರೆ ಮತ್ತು ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ.

ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು, ಇದನ್ನು ಸಂಪೂರ್ಣವಾಗಿ ಅಸಹ್ಯಕರ ಮತ್ತು ಅನಾರೋಗ್ಯಕರ ಎಂದು ಹೇಳಿದ್ದು, ಈ ನಾಚಿಕೆಗೇಡಿನ ಕೃತ್ಯದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಾನು ದೆಹಲಿ ಪೊಲೀಸರು ಮತ್ತು ದೆಹಲಿ ಮೆಟ್ರೋಗೆ ನೋಟಿಸ್ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular