HomeKarnatakaBIG NEWS: ಗುಜರಾತ್ ಮಾದರಿಯೇ ಬಿಜೆಪಿ ಸೋಲಿಗೆ ಕಾರಣ; ಎಂ.ಪಿ. ರೇಣುಕಾಚಾರ್ಯ ಆರೋಪ

BIG NEWS: ಗುಜರಾತ್ ಮಾದರಿಯೇ ಬಿಜೆಪಿ ಸೋಲಿಗೆ ಕಾರಣ; ಎಂ.ಪಿ. ರೇಣುಕಾಚಾರ್ಯ ಆರೋಪ

ದಾವಣಗೆರೆ: ಬಿಜೆಪಿಯ ತಪ್ಪು ನಿರ್ಧಾರಗಳೆ ವಿಧಾನಸಭಾ ಚುನಾವಣೆಯಲ್ಲಿ ಸೋಲಿಗೆ ಕಾರಣ ಎಂದು ಮಾಜಿ ಸಚಿವ, ಎಂ.ಪಿ ರೇಣುಕಾಚಾರ್ಯ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ಬಿಜೆಪಿಯ ತಪ್ಪು ನಿರ್ಧಾರಗಳು, ಗುಜರಾತ್ ಮಾದರಿಯೇ ಸೋಲಿಗೆ ಕಾರಣ ಎಂದು ಆರೊಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿಗಳು ನಮ್ಮನ್ನು ಹಾಳುಮಾಡಿದವು. ಪಕ್ಷವನ್ನು ಕಟ್ಟಿಬೆಳೆಸಿದ ಹಿರಿಯ ನಾಯಕರನ್ನು ನಿರ್ಲಕ್ಷಿಸಿದರು. ಅನ್ನಭಾಗ್ಯ ಅಕ್ಕಿಯನ್ನು 5ಕೆಜಿಗೆ ಸೀಮಿತಗೊಳಿಸಿದ್ದು ಕೂಡ ಬಿಜೆಪಿ ಸೋಲಿಗೆ ಕಾರಣವಾಗಿದೆ ಎಂದು ಹೇಳಿದ್ದಾರೆ

ಬಿಜೆಪಿ ಬಡವರ ಹೊಟ್ಟೆ ಮೇಲೆ ಹೊಡೆಯಿತು ಎಂದು ಜನ ಹೇಳುತ್ತಿದ್ದಾರೆ. ಯಡಿಯೂರಪ್ಪನವರನ್ನು ಹಿಂದೆಸರಿಸಿದ್ದು ಬಿಜೆಪಿ ಸೋಲಲು ಪ್ರಮುಖ ಕಾರಣ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular