ಬೆಂಗಳೂರು: ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಹೈಕಮಾಂಡ್ ಮಟ್ಟದಲ್ಲಿ ದೆಹಲಿಯಲ್ಲಿ ಮಹತ್ವದ ಮಾತುಕತೆ ನಡೆದಿರುವ ಬೆನ್ನಲ್ಲೇ ಇತ್ತ ಬೆಂಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.
ಬೆಂಗಳೂರಿನ ಕುಮಾರ ಕೃಪಾ ರಸ್ತೆಯಲ್ಲಿರುವ ಸಿದ್ದರಾಮಯ್ಯ ಸರ್ಕಾರಿ ನಿವಾಸದ ಬಳಿ ಅಭಿಮಾನಿಗಳ ದಂಡೇ ಆಗಮಿಸುತ್ತಿದ್ದು, ಸಿದ್ದರಾಮಯ್ಯ ಪರ ಘೋಷಣೆಗಳನ್ನು ಕೂಗಿ ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ನಿವಾಸಕ್ಕೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.
70ಕ್ಕೂ ಹೆಚ್ಚು ಪೊಲೀಸರು, ಒಂದು ಕೆ ಎಸ್ ಆರ್ ಪಿ ವ್ಯಾನ್ ಸೇರಿದಂತೆ ಭದ್ರತೆ ನಿಯೋಜಿಸಲಾಗಿದೆ.