ಸಿಎಂ ಆಕಾಂಕ್ಷಿಯಾಗಿದ್ದ ಡಿಕೆಶಿಗೆ ಬಿಗ್ ಶಾಕ್: 2ನೇ ಬಾರಿಗೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಹುದ್ದೆಗಾಗಿ ನಡೆದ ತೀವ್ರ ಪೈಪೋಟಿಯಲ್ಲಿ ಸಿದ್ದರಾಮಯ್ಯ ಮೇಲುಗೈ ಸಾಧಿಸಿದ್ದು, ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ರಾಜ್ಯದಲ್ಲಿ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಸಿಎಂ ಹುದ್ದೆಗಾಗಿ ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಭಾರಿ ಪೈಪೋಟಿಯೇ ನಡೆದಿತ್ತು. ಹೈಕಮಾಂಡ್ ಇಬ್ಬರ ಮನವೊಲಿಸಲು ನಡೆಸಿದ ಪ್ರಯತ್ನ ಐದು ದಿನಗಳ ಕಾಲ ಮುಂದುವರೆದಿತ್ತು. ಮಧ್ಯರಾತ್ರಿ ನಡೆದ ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿದ್ದು, ಡಿ.ಕೆ. ಶಿವಕುಮಾರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಒಪ್ಪಿಕೊಳ್ಳುವಂತೆ ಮನವೊಲಿಸುವಲ್ಲಿ ಹೈಕಮಾಂಡ್ ಯಶಸ್ವಿಯಾಗಿದೆ.

ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ದೇವರಾಜ ಅರಸು ನಂತರ ಐದು ವರ್ಷ ಪೂರ್ಣ ಪ್ರಮಾಣ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಹೆಗ್ಗಳಿಕೆ ಹೊಂದಿರುವ ಸಿದ್ದರಾಮಯ್ಯ ಮತ್ತೊಮ್ಮೆ ರಾಜ್ಯದ ಚುಕ್ಕಾಣಿ ಹಿಡಿಯಲಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read