ದನದ ವ್ಯಾಪಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಲಪಂಥೀಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಹಾಗೂ ಇತರ ನಾಲ್ವರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇವರೆಲ್ಲರನ್ನೂ ಏಪ್ರಿಲ್ 5ರಂದು ರಾಜಸ್ಥಾನದಲ್ಲಿ ಬಂಧಿಸಲಾಗಿತ್ತು.
ರಾಮನಗರ ಜಿಲ್ಲೆಯಲ್ಲಿ ಜಾನುವಾರು ಸಾಗಾಟಕ್ಕೆ ಇದ್ರೀಸ್ ಪಾಷಾ (39) ಎಂಬಾತನನ್ನು ಕೊಂದ ಆರೋಪದ ಮೇಲೆ ಐವರು ಆರೋಪಿಗಳನ್ನ ಬಂಧಿಸಲಾಗಿತ್ತು. ವಿಚಾರಣಾ ನ್ಯಾಯಾಲಯವು ಜಾಮೀನು ನಿರಾಕರಿಸಿದ ನಂತರ ಅವರು ಹೈಕೋರ್ಟ್ ಅನ್ನು ಸಂಪರ್ಕಿಸಿದ್ದರು.
ಜಾಮೀನು ಮಂಜೂರು ಮಾಡುವ ಮುನ್ನ ಆರೋಪಿಗಳು ಸಲ್ಲಿಸಿದ್ದ ಮೂರು ಪ್ರತ್ಯೇಕ ಅರ್ಜಿಗಳನ್ನು ನ್ಯಾಯಮೂರ್ತಿ ಎಂಜಿ ಉಮಾ ಅವರ ರಜಾಕಾಲದ ಪೀಠ ವಿಚಾರಣೆ ನಡೆಸಿತು.
ಪುನೀತ್ ಕೆರೆಹಳ್ಳಿ ‘ರಾಷ್ಟ್ರ ರಕ್ಷಣಾ ಪಡೆ’ ಎಂಬ ಬಲಪಂಥೀಯ ಹಿಂದುತ್ವದ ಗುಂಪಿನ ಮುಖ್ಯಸ್ಥ. ಗೋ ರಕ್ಷಣೆ ಮತ್ತು ಸಾಗಣೆಯಾಗುತ್ತಿರುವ ಜಾನುವಾರುಗಳನ್ನು ರಕ್ಷಿಸುವುದು ಇದರ ಪ್ರಮುಖ ಉದ್ದೇಶ.