HomeKarnatakaBIG NEWS: ಸಿದ್ದರಾಮಯ್ಯ ಸಿಎಂ; ಡಿ.ಕೆ. ಶಿವಕುಮಾರ್ ಡಿಸಿಎಂ; ಕಾಂಗ್ರೆಸ್ ಅಧಿಕೃತ ಘೋಷಣೆ

BIG NEWS: ಸಿದ್ದರಾಮಯ್ಯ ಸಿಎಂ; ಡಿ.ಕೆ. ಶಿವಕುಮಾರ್ ಡಿಸಿಎಂ; ಕಾಂಗ್ರೆಸ್ ಅಧಿಕೃತ ಘೋಷಣೆ

ನವದೆಹಲಿ: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅಧಿಕೃತವಾಗಿ ಘೋಷಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಸಿ. ವೇಣುಗೋಪಾಲ್, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಭಾರತ್ ಜೋಡೋ ಯಾತ್ರೆ ಕಾರಣ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಇಬ್ಬರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಕಾಂಗ್ರೆಸ್ ಸಾಕಷ್ಟು ಶ್ರಮವಹಿಸಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ಆಯ್ಕೆ ಬಗ್ಗೆ ಒನ್ ಟು ಒನ್ ಚರ್ಚೆ ನಡೆಯಿತು. ಮೊದಲು ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರೊಂದಿಗೆ ಮಾತುಕತೆ ನಡೆಯಿತು. ಅಂತಿಮವಾಗಿ ಸಿದ್ದರಾಮಯ್ಯನವರನ್ನು ಸಿಎಂ ಆಗಿ ಹಾಗೂ ಡಿ.ಕೆ. ಶಿವಕುಮಾರ್ ಅವರನ್ನು ಡಿಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಕರ್ನಾಟಕಕ್ಕೆ ಒಂದೇ ಡಿಸಿಎಂ ಹುದ್ದೆ. ಒಬ್ಬರು ಮಾತ್ರ ಉಪಮುಖ್ಯಮಂತ್ರಿಯಾಗಿರುತ್ತಾರೆ. ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿ ಜೊತೆಗೆ ಕೆಪಿಸಿಸಿ ಅಧ್ಯಕ್ಷರಾಗಿಯೂ ಮುಂದುವರೆಯುತ್ತಾರೆ ಎಂದು ಹೇಳಿದರು.

ಮೇ 20ರಂದು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಹಾಗೂ ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular