ಬೆಂಗಳೂರು: ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗುತ್ತಿದ್ದಂತೆ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಸಿದ್ದರಾಮಯ್ಯನವರ ಬೆಂಗಳೂರಿನ ನಿವಾಸದತ್ತ ಆಗಮಿಸಿರುವ ಅಭಿಮಾನಿಗಳು ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ.
ಕುಮಾರಕೃಪಾ ರಸ್ತೆಯಲ್ಲಿರುವ ಸಿದ್ದರಾಮಯ್ಯನವರ ಸರ್ಕಾರಿ ನಿವಾಸದ ಬಳಿ ಆಗಮಿಸಿರುವ ಅಭಿಮಾನಿಗಳು ಸಿದ್ದರಾಮಯ್ಯ ಭಾವಚಿತ್ರಕ್ಕೆ ಕ್ಷೇರಾಭಿಷೇಕ ಮಾಡಿ ಜಯಘೋಷ ಕೂಗಿದ್ದಾರೆ.
ಇನ್ನೊಂದೆಡೆ ಸಿದ್ದರಾಮಯ್ಯ 2.0 ಎಂಬ ಬರಹವುಳ್ಳ 7 ಕೆಜಿ ತೂಕದ ಕೇಕ್ ಕಟ್ ಮಾಡಿ ಸಿದ್ದರಾಮಯ್ಯ ಪರ ಘೋಷಣೆ ಕೂಗಿ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಸಿದ್ದರಾಮಯ್ಯ ನಿವಾಸದತ್ತ ಅಭಿಮಾನಿಗಳು, ಬೆಂಬಲಿಗರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿದೆ.