HomeKarnatakaBIG NEWS: ಗ್ಯಾರಂಟಿಗಳನ್ನು ಹೇಗೆ ಅನುಷ್ಠಾನ ಮಾಡ್ತಾರೆ ನೋಡೋಣ; ಹೆಚ್.ಡಿ. ಕುಮಾರಸ್ವಾಮಿ

BIG NEWS: ಗ್ಯಾರಂಟಿಗಳನ್ನು ಹೇಗೆ ಅನುಷ್ಠಾನ ಮಾಡ್ತಾರೆ ನೋಡೋಣ; ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು: ಸಿದ್ದರಾಮಯ್ಯನವರಿಗೆ ಸಿಎಂ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಡಿಸಿಎಂ ಸ್ಥಾನ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ಪಕ್ಷದವರು ಈ ಬಗ್ಗೆ ತೀರ್ಮಾನ ಮಾಡಿದ್ದಾರೆ. ಅದರ ಬಗ್ಗೆ ನಾನೇನೂ ಮಾತನಾಡಲ್ಲ ಎಂದಿದ್ದಾರೆ.

ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಈಗ ಹೊಸ ಸರ್ಕಾರ ರಚನೆಯಾಗುತ್ತಿದೆ. 5 ಗ್ಯಾರಂಟಿಗಳನ್ನು ಹೇಗೆ ಅನುಷ್ಠಾನಕ್ಕೆ ತರುತ್ತಾರೆ? ಬಜೆಟ್ ಯಾವ ರೀತಿಯಾಗಿರುತ್ತೇ ಎಂಬುದನ್ನು ನೋಡಬೇಕಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆ ತೀವ್ರ ಹಿನ್ನಡೆ ವಿಚಾರವಾಗಿ ಮಾತನಾಡಿದ ಕುಮಾರಸ್ವಾಮಿ, ನನ್ನ ನಿರೀಕ್ಷೆ ಹುಸಿಯಾಗಿದೆ. ಮಾಧ್ಯಮಗಳ ನೀರೀಕ್ಷೆ ನಿಜವಾಗಿದೆ. ನಾನು ಕಳೆದ 6 ತಿಂಗಳಿಂದ ಶ್ರಮ ಪಟ್ಟು ಕೆಲಸ ಮಾಡಿದ್ದೆ. ಪಂಚರತ್ನ ಯೋಜನೆಗಳು ಜನರಿಗೆ ಇಷ್ಟವಾಗಿಲ್ಲ ಅನ್ಸುತ್ತೆ. ಕಾಂಗ್ರೆಸ್ ನ ಗ್ಯಾರಂಟಿಗಳನ್ನು ನಂಬಿ ಮತ ಹಾಕಿದ್ದಾರೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular