HomeIndiaಕೇಂದ್ರ ಕ್ಯಾಬಿನೆಟ್ ನಲ್ಲಿ ಮತ್ತೊಂದು ಬದಲಾವಣೆ

ಕೇಂದ್ರ ಕ್ಯಾಬಿನೆಟ್ ನಲ್ಲಿ ಮತ್ತೊಂದು ಬದಲಾವಣೆ

ನವದೆಹಲಿ: ಇಂದು ಬೆಳಿಗ್ಗೆ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರನ್ನು ಭೂ ವಿಜ್ಞಾನ ಸಚಿವರನ್ನಾಗಿ ನಿಯೋಜಿಸಲಾಗಿದ್ದು, ಅರ್ಜುನ್ ರಾಮ್ ಮೇಘವಾಲ್ ಅವರಿಗೆ ಕಾನೂನು ಸಚಿವಾಲಯದ ಉಸ್ತುವಾರಿ ವಹಿಸಲಾಗಿದೆ.

ಇದಾದ ಬಳಿಕ ಕೇಂದ್ರ ರಾಜ್ಯ ಖಾತೆ ಸಚಿವ ಎಸ್.ಪಿ. ಸಿಂಗ್ ಬಾಘೇಲ್ ಅವರನ್ನು ಕೇಂದ್ರ ಕಾನೂನು ಸಚಿವಾಲಯದಿಂದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಕ್ಕೆ ವರ್ಗಾಯಿಸಲಾಗಿದೆ. ಅವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ರಾಜ್ಯ ಖಾತೆ ಸಚಿವರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಧಾನಿಯವರ ಸಲಹೆಯಂತೆ ರಾಷ್ಟ್ರಪತಿಗಳು ರಾಜ್ಯ ಸಚಿವ ಎಸ್.ಪಿ. ಸಿಂಗ್ ಬಾಘೇಲ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ರಾಜ್ಯ ಸಚಿವರಾಗಿ ನಿಯೋಜಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular