HomeKarnatakaಪೋಷಕರಿಗೆ ಗುಡ್ ನ್ಯೂಸ್: ನಿಗದಿತ ದರದಲ್ಲೇ ಪಠ್ಯಪುಸ್ತಕ: ಹೆಚ್ಚು ಹಣ ವಸೂಲಿ ಮಾಡುವ ಶಾಲೆಗಳ ವಿರುದ್ಧ...

ಪೋಷಕರಿಗೆ ಗುಡ್ ನ್ಯೂಸ್: ನಿಗದಿತ ದರದಲ್ಲೇ ಪಠ್ಯಪುಸ್ತಕ: ಹೆಚ್ಚು ಹಣ ವಸೂಲಿ ಮಾಡುವ ಶಾಲೆಗಳ ವಿರುದ್ಧ ಕ್ರಮಕ್ಕೆ ಸೂಚನೆ

ಬೆಂಗಳೂರು: ಪಠ್ಯಪುಸ್ತಕಕ್ಕೆ ಹೆಚ್ಚು ಹಣ ವಸೂಲಿ ಮಾಡುತ್ತಿರುವ ಖಾಸಗಿ ಶಾಲೆಗಳ ವಿರುದ್ಧ ಪೋಷಕರು ದೂರು ನೀಡಿದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಕ್ರಮಕ್ಕೆ ಸೂಚನೆ ನೀಡಿದೆ.

ಕರ್ನಾಟಕ ಪಠ್ಯಪುಸ್ತಕ ಸಂಘದಿಂದ ಖರೀದಿಸಿದ ಪಠ್ಯಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ನೀಡುವಾಗ ನಿಗದಿತ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಅನುದಾನ ರಹಿತ ಖಾಸಗಿ ಶಾಲೆಗಳ ವಿರುದ್ಧ ಕ್ರಮ ಜರುಗಿಸಲು ಸೂಚನೆ ನೀಡಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲಾ ಜಿಲ್ಲಾ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಈ ಕುರಿತಾಗಿ ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಪಠ್ಯಕ್ರಮ ಅನುಸರಿಸುವ ಖಾಸಗಿ ಶಾಲೆಗಳಿಗೆ ಪಠ್ಯಪುಸ್ತಕ ಸಂಘದಿಂದ ಸಿದ್ಧಪಡಿಸಲಾದ ಪಠ್ಯಪುಸ್ತಕಗಳನ್ನು ಸರ್ಕಾರ ಸರಬರಾಜು ಮಾಡುತ್ತದೆ. ಈ ಬಾರಿಯೂ ಖಾಸಗಿ ಶಾಲೆಗಳು ಸಲ್ಲಿಸಿದ ಬೇಡಿಕೆ ಆಧಾರದಲ್ಲಿ ಪಠ್ಯಪುಸ್ತಕಗಳನ್ನು ಸರಬರಾಜು ಮಾಡಲಾಗಿದೆ. ಪ್ರತಿ ಪಠ್ಯಪುಸ್ತಕಕ್ಕೆ ದರ ನಿಗದಿಪಡಿಸಿ ನಮೂದಿಸಲಾಗಿದ್ದು, ಇದೇ ದರ ಪಡೆದುಕೊಂಡು ವಿದ್ಯಾರ್ಥಿಗಳಿಗೆ ಪುಸ್ತಕ ನೀಡಬೇಕೆಂದು ಸೂಚನೆ ನೀಡಲಾಗಿದೆ. ಕೆಲವು ಶಾಲೆಗಳು ಹೆಚ್ಚು ಹಣ ವಸೂಲಿ ಮಾಡುತ್ತಿರುವ ಕುರಿತು ಪೋಷಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಈ ಕ್ರಮ ಕೈಗೊಂಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular