HomeKarnatakaರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಇಂದು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಮಹಿಳೆಯರಿಗೆ 2000 ರೂ.,...

ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್: ಇಂದು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಮಹಿಳೆಯರಿಗೆ 2000 ರೂ., ಫ್ರೀ ವಿದ್ಯುತ್ ಸೇರಿ ರಾಜ್ಯದ ಜನತೆಗೆ ಭರ್ಜರಿ ಕೊಡುಗೆ ಘೋಷಣೆ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಹಾಗೂ ಎಂಟು ಶಾಸಕರು ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದು, ಮೊದಲ ಸಚಿವ ಸಂಪುಟ ಸಭೆಯಲ್ಲಿ ಕಾಂಗ್ರೆಸ್ 5 ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ.

ಪ್ರತಿಯೊಬ್ಬರಿಗೂ 200 ಯುನಿಟ್ ಉಚಿತ ವಿದ್ಯುತ್ ಘೋಷಿಸಲಾಗಿದೆ. ಪ್ರತಿ ಮನೆಯ ಯಜಮಾನಿಗೆ 2 ಸಾವಿರ ರೂಪಾಯಿ ನೀಡುವುದಾಗಿ ಕಾಂಗ್ರೆಸ್ ಚುನಾವಣಾ ಪೂರ್ವ ಭರವಸೆ ನೀಡಿದ್ದು, ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಮೊದಲ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಿ ಬಿಪಿಎಲ್, ಅಂತ್ಯೋದಯ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಪ್ರತಿಯೊಬ್ಬರಿಗೂ ತಲಾ 10 ಕೆಜಿ ಅಕ್ಕಿ ಘೋಷಿಸಲಾಗಿದೆ. ಮಹಿಳೆಯರ ಉಚಿತ ಪ್ರಯಾಣಕ್ಕೆ ಇಂದಿನಿಂದಲೇ ಅವಕಾಶ ಕಲ್ಪಿಸುವ ಸಾಧ್ಯತೆ ಇದೆ. ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು. ಇನ್ನು ಪದವೀಧರರಿಗೆ 3000 ರೂ. ಹಾಗೂ ಡಿಪ್ಲೋಮಾ ಪದವೀಧರರಿಗೆ 1500 ರೂ. ಮಾಸಿಕ ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆ ಬಗ್ಗೆ ಇಂದು ಘೋಷಣೆ ಮಾಡುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular