HomeKarnatakaBIG NEWS: ಕಂಠೀರವ ಸ್ಟೇಡಿಯಂಗೆ ಹರಿದು ಬಂದ ಜನಸಾಗರ; ಗುಂಪು ಚದುರಿಸಲು ಪೊಲೀಸರಿಂದ ಲಾಠಿ ಪ್ರಹಾರ;...

BIG NEWS: ಕಂಠೀರವ ಸ್ಟೇಡಿಯಂಗೆ ಹರಿದು ಬಂದ ಜನಸಾಗರ; ಗುಂಪು ಚದುರಿಸಲು ಪೊಲೀಸರಿಂದ ಲಾಠಿ ಪ್ರಹಾರ; ಪೊಲೀಸರು ಸೇರಿ ಹಲವರಿಗೆ ಗಾಯ

ಬೆಂಗಳೂರು: ಇಂದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭ ಹಿನ್ನೆಲೆಯಲ್ಲಿ ಕಠೀರವ ಸ್ಟೇಡಿಯಂನತ್ತ ಜನಸಾಗರವೇ ಹರಿದು ಬರುತ್ತಿದೆ. ಜನರ ಗುಂಪು ಹೆಚ್ಚುತ್ತಿರುವುದರಿಂದ ನೂಕಾಟ ತಳ್ಳಾಟ ನಡೆದಿದ್ದು, ಪೊಲೀಸರು ಲಾಠಿ ಪ್ರಹಾರ ಮಾಡಿದ ಘಟನೆ ನಡೆದಿದೆ.

ಕಂಠೀರವ ಕ್ರೀಡಾಂಗಣದಲ್ಲಿ ಇಂದು ಸಿಎಂ ಆಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಜನರು ಆಗಮಿಸುತ್ತಿದ್ದು, ನೂಕುನುಗ್ಗಲು ಉಂಟಾಗಿದೆ. ಗುಂಪು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ.

ಈ ವೇಳೆ ಪೊಲೀಸರು ಸೇರಿ ಹಲವರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಟ್ರಾಫಿಕ್ ಇನ್ಸ್ ಪೆಕ್ಟರ್ ಗೂ ಗಾಯಗಳಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular