HomeKarnatakaBIG NEWS: ರಾಹುಲ್ - ಪ್ರಿಯಾಂಕ ಭೇಟಿಗೆ 'ಶಾಂಗ್ರಿಲಾ' ಹೋಟೆಲ್ ಗೆ ಆಗಮಿಸಿದ ನಿಯೋಜಿತ ಸಿಎಂ...

BIG NEWS: ರಾಹುಲ್ – ಪ್ರಿಯಾಂಕ ಭೇಟಿಗೆ ‘ಶಾಂಗ್ರಿಲಾ’ ಹೋಟೆಲ್ ಗೆ ಆಗಮಿಸಿದ ನಿಯೋಜಿತ ಸಿಎಂ ಸಿದ್ದರಾಮಯ್ಯ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜಯ ಸಾಧಿಸಿರುವ ಕಾಂಗ್ರೆಸ್ ಪಕ್ಷ, ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ಭರ್ಜರಿಯಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದು, ಇದಕ್ಕಾಗಿ ಈಗಾಗಲೇ ಕಂಠೀರವ ಕ್ರೀಡಾಂಗಣದಲ್ಲಿ ವೇದಿಕೆ ಸಿದ್ಧವಾಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ನಾಯಕರಾದ ರಣದೀಪ್ ಸಿಂಗ್ ಸುರ್ಜೇವಾಲಾ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಕೆ.ಸಿ. ವೇಣುಗೋಪಾಲ್ ಮೊದಲಾದವರು ಈಗಾಗಲೇ ಬೆಂಗಳೂರಿಗೆ ಆಗಮಿಸಿ ಶಾಂಗ್ರಿಲಾ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರನ್ನು ಎಚ್ಎಎಲ್ ವಿಮಾನ ನಿಲ್ದಾಣದಿಂದ ಖುದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕರೆದುಕೊಂಡು ಬಂದಿದ್ದು, ಇದೀಗ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ನಾಯಕರುಗಳ ಭೇಟಿಗಾಗಿ ಶಾಂಗ್ರಿಲಾ ಹೋಟೆಲ್ ಗೆ ತೆರಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular