HomeKarnatakaಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮತ್ತೊಂದು ಅಪಘಾತ; ಎಸ್‌ಯುವಿ ಪಲ್ಟಿ, ಪವಾಡ ಸದೃಶ ರೀತಿಯಲ್ಲಿ...

ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮತ್ತೊಂದು ಅಪಘಾತ; ಎಸ್‌ಯುವಿ ಪಲ್ಟಿ, ಪವಾಡ ಸದೃಶ ರೀತಿಯಲ್ಲಿ ಪಾರು

ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮತ್ತೊಂದು ಅಪಘಾತ ಪ್ರಕರಣ ವರದಿಯಾಗಿದೆ. ಗುರುವಾರ ಬೆಳಗ್ಗೆ
ಹೊಸ ಬೂದನೂರು ಗ್ರಾಮದ ಬಳಿ ಸ್ಪೋರ್ಟ್ಸ್ ಯುಟಿಲಿಟಿ ವೆಹಿಕಲ್ (ಎಸ್‌ಯುವಿ) ಮೈಸೂರಿಗೆ ತೆರಳುತ್ತಿದ್ದ ವೇಳೆ
ಪಲ್ಟಿಯಾದಾಗ ಅದರಲ್ಲಿದ್ದವರು ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ.

ನಾಲ್ವರು ಪ್ರಯಾಣಿಕರಿದ್ದ ಟೊಯೊಟಾ ಫಾರ್ಚುನರ್ ಎಸ್‌ಯುವಿ ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿತ್ತು. ಹೊಸ ಬೂದನೂರು ಗ್ರಾಮದ ಬಳಿ ಬಂದಾಗ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಫೆನ್ಸ್ ಗೆ ಡಿಕ್ಕಿ ಹೊಡೆದು ಸರ್ವಿಸ್ ರಸ್ತೆಗೆ ಪಲ್ಟಿಯಾಗಿದೆ. ಆದರೆ ವಾಹನದಲ್ಲಿದ್ದವರು ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಒಂದು ವೇಳೆ ಗ್ರಾಮಸ್ಥರು ಬಸ್‌ಗಾಗಿ ಕಾಯುತ್ತಿದ್ದ ವೇಳೆಯಾಗಿದ್ದರೆ ಭಾರೀ ದುರಂತ ಸಂಭವಿಸುತ್ತಿತ್ತು ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಸ್ತೆಯನ್ನು ಅವೈಜ್ಞಾನಿಕವಾಗಿ ಹಾಕಲಾಗಿದ್ದು ರಸ್ತೆ ದುರಸ್ತಿಗೆ ಹಲವು ಬಾರಿ ಮನವಿ ಮಾಡಿದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು. ಮಂಡ್ಯ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular