HomeKarnatakaBIG NEWS: ಪ್ರಮಾಣವಚನದಿಂದ ದೂರ ಉಳಿದ ಶಾಸಕ ಮಧು ಬಂಗಾರಪ್ಪ

BIG NEWS: ಪ್ರಮಾಣವಚನದಿಂದ ದೂರ ಉಳಿದ ಶಾಸಕ ಮಧು ಬಂಗಾರಪ್ಪ

ಬೆಂಗಳೂರು: ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಪ್ರಮಾಣವಚನ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಅಸಮಾಧಾನದ ಹೊಗೆ ಆರಂಭವಾಗಿದೆ.

ಪ್ರಮಾಣವಚನ ಕಾರ್ಯಕ್ರಮದಿಂದ ಶಾಸಕ ಮಧು ಬಂಗಾರಪ್ಪ ದೂರ ಉಳಿದಿದ್ದಾರೆ. ಕಠೀರವ ಕ್ರೀಡಾಂಗಣದಲ್ಲಿ ನಡೆದ ನೂತನ ಸಿಎಂ, ಡಿಸಿಎಂ ಹಾಗೂ ಸಚಿವರ ಪ್ರಮಾಣವಚನ ಕಾರ್ಯಕ್ರಮಕ್ಕೆ ಶಾಸಕ ಮಧು ಬಂಗಾರಪ್ಪ ಗೈರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ರೆಡಿ ಆಗಿ ಎಂದು ಮಧು ಬಂಗಾರಪ್ಪನವರಿಗೆ ಸೂಚಿಸಲಾಗಿತ್ತಂತೆ. ಆದರೆ ಇಂದು ಬೆಳಿಗ್ಗೆ ನೂತನ ಸಚಿವರ ಪಟ್ಟಿಯಲ್ಲಿ ಹೆಸರಿರಲಿಲ್ಲ. ಹೀಗಾಗಿ ಪಕ್ಷದ ನಾಯಕರನ್ನು ಸಂಪರ್ಕಿಸಿದರೂ ಸೂಕ್ತ ಉತ್ತರ ಬಂದಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮಧು ಬಂಗಾರಪ್ಪ ಪ್ರಮಾಣವಚನ ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular