HomeKarnatakaBIG NEWS: ಮುಂದಿನ ಸಂಪುಟ ಸಭೆ ಬಳಿಕ ಗ್ಯಾರಂಟಿ ಯೋಜನೆಗಳ ಜಾರಿ ಆದೇಶ; ಸಿಎಂ ಸಿದ್ದರಾಮಯ್ಯ

BIG NEWS: ಮುಂದಿನ ಸಂಪುಟ ಸಭೆ ಬಳಿಕ ಗ್ಯಾರಂಟಿ ಯೋಜನೆಗಳ ಜಾರಿ ಆದೇಶ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗಳಿಗೆ ಮೊದಲ ಸಚಿವ ಸಂಪುಟ ಸಭೆಯಲ್ಲಿ ತಾತ್ವಿಕ ಒಪ್ಪಿಗೆ ದೊರೆತಿದ್ದು, ಮುಂದಿನ ಸಂಪುಟ ಸಭೆ ಬಳಿಕ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ನೂತನ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯಕ್ಕೆ ಆರ್ಥಿಕ ಹೊಡೆತ ಬೀಳದಂತೆ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗುವುದು. ಎಷ್ಟೇ ಕಷ್ಟವಾದರೂ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದರು.

5 ಗ್ಯಾರಂಟಿ ಯೋಜನೆಗಳು:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

* ಗೃಹಲಕ್ಷ್ಮೀ – ಮನೆಯೊಡತಿಗೆ ತಿಂಗಳಿಗೆ 2000 ರೂಪಾಯಿ

* ಗೃಹಜ್ಯೋತಿ – 200 ಯೂನಿಟ್ ವರೆಗೆ ಉಚಿತ ವಿದ್ಯುತ್

* ಅನ್ನಭಾಗ್ಯ – ಪ್ರತಿಯೊಬ್ಬರಿಗೆ 10 ಕೆಜಿ ಅಕ್ಕಿ

* ಯುವನಿಧಿ – ಪದವೀಧರರಿಗೆ ತಿಂಗಳಿಗೆ 3000 ರೂಪಾಯಿ

* ಶಕ್ತಿ – ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ

For Latest News Updates, Join Our Whatsapp Community🚩
RELATED ARTICLES

Most Popular