ಬೆಂಗಳೂರು: ಮೇ 22 ರಿಂದ ಮೂರು ದಿನಗಳ ಕಾಲ ವಿಧಾನಸಭೆ ಅಧಿವೇಶನ ನಡೆಯಲಿದೆ ಎಂದು ನೂತನ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸೋಮವಾರ, ಮಂಗಳವಾರ ಹಾಗೂ ಬುಧವಾರ ವಿಧಾನಸಭೆ ಅಧಿವೇಶನ ನಡೆಯಲಿದೆ. ಅಧಿವೇಶದಲ್ಲಿ ನೂತನ ಶಾಸಕರ ಪ್ರಮಾಣವಚನ ನಡೆಯಲಿದ್ದು, ಬಳಿಕ ನೂತನ ಸ್ಪೀಕರ್ ಆಯ್ಕೆ ಮಾಡಲಾಗುವುದು.
ಹಂಗಾಮಿ ಸ್ಪೀಕರ್ ಆಗಿ ಹಳಿಯಾಳ ಕ್ಷೇತ್ರದ ಶಾಸಕ ಆರ್.ವಿ. ದೇಶಪಾಂಡೆ ಅವರು ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.