HomeKarnatakaಕಾಂಗ್ರೆಸ್ ಬಣ್ಣ ಬದಲಾಯಿಸಿದೆ, ಜನರ ನಿರೀಕ್ಷೆ ಹುಸಿಯಾಗಿದೆ: ಮಾಜಿ ಸಿಎಂ ಬೊಮ್ಮಾಯಿ ಆರೋಪ

ಕಾಂಗ್ರೆಸ್ ಬಣ್ಣ ಬದಲಾಯಿಸಿದೆ, ಜನರ ನಿರೀಕ್ಷೆ ಹುಸಿಯಾಗಿದೆ: ಮಾಜಿ ಸಿಎಂ ಬೊಮ್ಮಾಯಿ ಆರೋಪ

ಬೆಂಗಳೂರು: ಕಾಂಗ್ರೆಸ್ ತನ್ನ ಬಣ್ಣ ಬದಲಾಯಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ನಡೆದಿದೆ. ಗ್ಯಾರಂಟಿ ಯೋಜನೆಗಳ ಘೋಷಣೆ ಬಗ್ಗೆ ಜನ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದರು. ಐದು ಗ್ಯಾರಂಟಿಗಳ ಬಗ್ಗೆ ಮುಖ್ಯಮಂತ್ರಿ ಸರಿಯಾಗಿ ಸ್ಪಷ್ಟನೆ ನೀಡಿಲ್ಲ. ಯಾವಾಗ ಐದು ಗ್ಯಾರಂಟಿ ಜಾರಿ ಎಂಬುದರ ಬಗ್ಗೆ ವಿವರಣೆ ನೀಡಿಲ್ಲ. ಸಂಪುಟ ಸಭೆಯಲ್ಲಿ ಜನರ ನಿರೀಕ್ಷೆಗಳನ್ನು ಹುಸಿಗೊಳಿಸಿದ್ದಾರೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ಸರ್ಕಾರ 3 ಲಕ್ಷ ಕೋಟಿ ರೂ. ಸಾಲ ಮಾಡಿದೆ ಎಂದು ಸಿಎಂ ಆರೋಪಿಸಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ಇದಕ್ಕೆ ಅಧಿವೇಶನದಲ್ಲೇ ನಾವು ಉತ್ತರ ಕೊಟ್ಟಿದ್ದೇವೆ ಎಂದು ಹೇಳಿದ್ದಾರೆ.

ಕೋವಿಡ್ ನಿಂದಾಗಿ ರಾಜ್ಯದಲ್ಲಿ ಈ ವರ್ಷ ಸಾಲ ಹೆಚ್ಚಾಗಿದೆ. ರಾಜ್ಯದ ಹಲವಾರು ಅಭಿವೃದ್ಧಿ ಕಾರ್ಯಗಳು ಸ್ಥಗಿತವಾಗಲಿವೆ. ಕಾಂಗ್ರೆಸ್ ಗ್ಯಾರಂಟಿ, ಘೋಷಣೆಯಾಗಿಯೇ ಉಳಿಯಲಿದೆ. ಇನ್ನೊಂದು ಸಂಪುಟ ಸಭೆಯವರೆಗೂ ಕಾದು ನೋಡೋಣ ಎಂದು ಬೊಮ್ಮಾಯಿ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular