ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಅನ್ನಭಾಗ್ಯ ಯೋಜನೆ ಜಾರಿಗೆ ರಾಜ್ಯ ಸರ್ಕಾರ ತಾತ್ವಿಕ ಅನುಮೋದನೆ ನೀಡಿದೆ.
ಅನ್ನಭಾಗ್ಯ ಯೋಜನೆ ಜಾರಿ ಬಗ್ಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದ್ದು, ಅನ್ನಭಾಗ್ಯ ಯೋಜನೆ ಅಡಿ ಉಚಿತವಾಗಿ 10 ಕೆಜಿ ಅಕ್ಕಿ ವಿತರಿಸಲಾಗುವುದು. ಸಂಪುಟದ ತೀರ್ಮಾನದಂತೆ ಅನ್ನಭಾಗ್ಯ ಯೋಜನೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ. ಕಾಂಗ್ರೆಸ್ 10 ಕೆಜಿ ಅಕ್ಕಿ ನೀಡುವುದಾಗಿ ಗ್ಯಾರಂಟಿ ನೀಡಿತ್ತು.
ಅಂತೆಯೇ ಪ್ರತಿ ಬಿಪಿಎಲ್, ಅಂತ್ಯೋದಯ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಪ್ರತಿಯೊಬ್ಬರಿಗೂ ತಲಾ 10 ಕೆಜಿ ಅಕ್ಕಿ ಘೋಷಿಸಲಾಗಿತ್ತು. ಈಗ ಸರ್ಕಾರದಿಂದ ಅಧಿಕೃತವಾಗಿ 10 ಕೆಜಿ ಅಕ್ಕಿ ವಿತರಣೆ ಬಗ್ಗೆ ಆದೇಶ ಹೊರಡಿಸಲಾಗಿದೆ.