BIG NEWS: ರಾಜ್ಯದ ನೂತನ ಅಡ್ವೋಕೇಟ್ ಜನರಲ್ ಆಗಿ ಶಶಿಕಿರಣ್ ಶೆಟ್ಟಿ ನೇಮಕ

ಶನಿವಾರದಂದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಇದರ ಬೆನ್ನಲ್ಲೇ ನಿವೃತ್ತ ನ್ಯಾಯಮೂರ್ತಿ ಪಿ. ವಿಶ್ವನಾಥ್ ಶೆಟ್ಟಿ ಅವರ ಪುತ್ರ ಶಶಿಕಿರಣ್ ಶೆಟ್ಟಿ ಅವರನ್ನು ರಾಜ್ಯದ ನೂತನ ಅಡ್ವೋಕೇಟ್ ಜನರಲ್ ಆಗಿ ನೇಮಕ ಮಾಡಲಾಗಿದೆ.

ಈ ಹಿಂದೆ ಶಾಸಕರ ಅನರ್ಹತೆ ಸೇರಿದಂತೆ ಹಲವು ಮಹತ್ವದ ಪ್ರಕರಣಗಳನ್ನು ಶಶಿಕಿರಣ್ ಶೆಟ್ಟಿ ನಿರ್ವಹಿಸಿದ್ದು, ಈ ಸಂದರ್ಭದಲ್ಲಿ ಮಾತನಾಡಿದ ಅವರು, ತಮ್ಮನ್ನು ನೇಮಿಸಿದ ಸರ್ಕಾರಕ್ಕೆ ಧನ್ಯವಾದ ಹೇಳಿದ್ದಾರೆ.

ಬಾಕಿ ಉಳಿದ ಪ್ರಕರಣಗಳನ್ನು ಶೀಘ್ರದಲ್ಲಿ ಇತ್ಯರ್ಥಗೊಳಿಸುವುದು, ಕಾನೂನು ಇಲಾಖೆ ಬಲಪಡಿಸುವುದು ಸೇರಿದಂತೆ ಹಲವು ಸುಧಾರಣೆಗಳಿಗೆ ಆದ್ಯತೆ ನೀಡುವುದಾಗಿ ಶಶಿಕಿರಣ್ ಶೆಟ್ಟಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ಅಧಿಕಾರದಲ್ಲಿದ್ದ ಅವಧಿಯಲ್ಲಿ ಪ್ರಭುಲಿಂಗ ನಾವದಗಿ ರಾಜ್ಯದ ಅಡ್ವೋಕೇಟ್ ಜನರಲ್ ಆಗಿ ಕಾರ್ಯನಿರ್ವಹಿಸಿದ್ದು, ಹೊಸ ಸರ್ಕಾರ ಅಧಿಕಾರಕ್ಕೆ ಬರ್ತಿದ್ದಂತೆ ರಾಜೀನಾಮೆ ನೀಡಿದ್ದರು. ಇದೀಗ ಆ ಸ್ಥಾನಕ್ಕೆ ಶಶಿಕಿರಣ್ ಶೆಟ್ಟಿ ಅವರ ನೇಮಕವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read