HomeKarnatakaಸರ್ಕಾರಿ ನೌಕರರಿಗೆ ನಗದು ರೂಪದಲ್ಲಿ ತುಟ್ಟಿ ಭತ್ಯೆ ಬಿಡುಗಡೆ ಮಾಡಲು ರಾಜ್ಯ ಸರ್ಕಾರಕ್ಕೆ ಆಗ್ರಹ

ಸರ್ಕಾರಿ ನೌಕರರಿಗೆ ನಗದು ರೂಪದಲ್ಲಿ ತುಟ್ಟಿ ಭತ್ಯೆ ಬಿಡುಗಡೆ ಮಾಡಲು ರಾಜ್ಯ ಸರ್ಕಾರಕ್ಕೆ ಆಗ್ರಹ

ಬೆಂಗಳೂರು: ಕಳೆದ ಜನವರಿ 1 ರಿಂದ ಬಾಕಿ ಇರುವ ತುಟ್ಟಿ ಭತ್ಯೆಯನ್ನು ನಗದು ರೂಪದಲ್ಲಿ ಸರ್ಕಾರಿ ನೌಕರರಿಗೆ ಬಿಡುಗಡೆ ಮಾಡುವಂತೆ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಡಾಕ್ಷರಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶನಿವಾರ ಪತ್ರ ಬರೆದಿರುವ ಅವರು ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಬಾಕಿ ಇದ್ದ ತುಟ್ಟಿ ಭತ್ಯೆಯನ್ನು ಪೂರ್ವಾನ್ವಯವಾಗಿ ಮಂಜೂರು ಮಾಡಬೇಕೆಂದು ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇಂದ್ರ ಸರ್ಕಾರ ಜನವರಿ 1ರಿಂದ ಜಾರಿಗೆ ಬರುವಂತೆ ಶೇಕಡ 4ರಷ್ಟು ತುಟ್ಟಿಭತ್ಯೆ ಮಂಜೂರು ಮಾಡಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ಶೇ. 4 ರಷ್ಟು ತುಟ್ಟಿಭತ್ಯೆ ಮಂಜೂರು ಮಾಡಲು ನೌಕರರ ಸಂಘದಿಂದ ಈ ಮೊದಲು ಮನವಿ ಮಾಡಲಾಗಿತ್ತು. ಆದರೆ, ಚುನಾವಣೆ ನೀತಿ ಸಂಹಿತೆ ಕಾರಣಕ್ಕೆ ಪ್ರಸ್ತಾಪ ತಡೆ ಹಿಡಿಯಲಾಗಿತ್ತು. ಈಗ ನಗದು ರೂಪದಲ್ಲಿ ಡಿಎ ಬಿಡುಗಡೆ ಮಾಡಬೇಕೆಂದು ಕೋರಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular