HomeKarnatakaಶಿವಕುಮಾರ ಶ್ರೀ ಆಪ್ತ, ಸಿದ್ದಗಂಗಾ ಮಠದ ಲೆಕ್ಕಪತ್ರ ವಿಭಾಗದ ಮುಖ್ಯಸ್ಥ ಎಂ.ಸಿದ್ದಲಿಂಗಯ್ಯ ಇನ್ನಿಲ್ಲ

ಶಿವಕುಮಾರ ಶ್ರೀ ಆಪ್ತ, ಸಿದ್ದಗಂಗಾ ಮಠದ ಲೆಕ್ಕಪತ್ರ ವಿಭಾಗದ ಮುಖ್ಯಸ್ಥ ಎಂ.ಸಿದ್ದಲಿಂಗಯ್ಯ ಇನ್ನಿಲ್ಲ

ತುಮಕೂರು: ಸಿದ್ದಗಂಗಾ ಮಠದ ಲೆಕ್ಕಪತ್ರ ವಿಭಾಗದ ಮುಖ್ಯಸ್ಥ, ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಗಳ ಆಪ್ತರಾಗಿದ್ದ ಎಂ.ಸಿದ್ದಲಿಂಗಯ್ಯ ವಿಧಿವಶರಾಗಿದ್ದಾರೆ.

95 ವರ್ಷ ವಯಸ್ಸಾಗಿದ್ದ ಅವರು, ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಶಿವಕುಮಾರ ಶ್ರೀಗಳಿಗೆ ಅತ್ಯಾಪ್ತರಾಗಿದ್ದ ಸಿದ್ದಲಿಂಗಯ್ಯ ಅವರ ಮೇಲೆ ಶ್ರೀಗಳಿಗೆ ಅಪಾರ ನಂಬಿಕೆ, ವಿಶ್ವಾಸವಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

1980ರಿಂದಲೂ ಮಠದಲ್ಲಿ ಲೆಕ್ಕಪತ್ರ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದರು. ಸಿದ್ದಲಿಂಗಯ್ಯನವರಿಗೆ ಮಠದಿಂದಲೇ ವಾಹನ ವ್ಯವಸ್ಥೆ ಕೂಡ ಕಲ್ಪಿಸಲಾಗಿತ್ತು. ತಮ್ಮ ಕೊನೆ ದಿನಗಳವರೆಗೂ ಮಠದ ಲೆಕ್ಕಪತ್ರ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.

ತುಮಕೂರಿನ ವೀರಶೈವ ರುದ್ರಭೂಮಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.

 

For Latest News Updates, Join Our Whatsapp Community🚩
RELATED ARTICLES

Most Popular