alex Certify BIG NEWS: ಸರ್ಕಾರದ ವಿರುದ್ಧ ಅವಹೇಳನಕಾರಿ ಪೋಸ್ಟ್; ಶಿಕ್ಷಕ ಅಮಾನತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸರ್ಕಾರದ ವಿರುದ್ಧ ಅವಹೇಳನಕಾರಿ ಪೋಸ್ಟ್; ಶಿಕ್ಷಕ ಅಮಾನತು

ಚಿತ್ರದುರ್ಗ: ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಶಿಕ್ಷಕನನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕಾನುಬೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಾಂತಮೂರ್ತಿ ಅಮಾನತುಗೊಂಡ ಶಿಕ್ಷಕ.

ಶಿಕ್ಷಕ ಶಾಂತಮೂರ್ತಿ, ರಾಜ್ಯಕ್ಕಾಗಿ ಮುಖ್ಯಮಂತ್ರಿಗಳು ಮಾಡಿದ ಸಾಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಲಿಸ್ಟ್ ಬಿಡುಗಡೆ ಮಾಡಿದ್ದರು. ಇದರಲ್ಲಿ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 2,42,000 ಕೋಟಿ ಸಾಲ ಆಗಿದೆ. ಬಿಟ್ಟಿ ಭಾಗ್ಯ ಕೊಡದೇ ಇನ್ನೇನು ಎಂದು ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಶಿಕ್ಷಕನನ್ನು ಅಮಾನತುಗೊಳಿಸಿ ಬಿಇಒ ಜಯಪ್ಪ ಆದೇಶ ಹೊರಡಿಸಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...