HomeLatest Newsಭರ್ಜರಿ ಶತಕದೊಂದಿಗೆ ಐಪಿಎಲ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಕೊಹ್ಲಿ

ಭರ್ಜರಿ ಶತಕದೊಂದಿಗೆ ಐಪಿಎಲ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಕೊಹ್ಲಿ

ಬೆಂಗಳೂರು: 16ನೇ ಆವೃತ್ತಿಯ ಐಪಿಎಲ್ ನಲ್ಲಿ ಕಪ್ ಗೆಲ್ಲುವ ಆರ್‌ಸಿಬಿ ಕನಸು ಈಡೇರಿಲ್ಲ. ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಆರ್‌ಸಿಬಿ ಆರು ವಿಕೆಟ್ ಗಳಿಂದ ಸೋತು ಪ್ಲೇ ಆಫ್ ಎಂಟ್ರಿಯಿಂದ ಹೊರಗುಳಿದಿದೆ. ಗುಂಪು ಹಂತದಲ್ಲೇ ಆರ್‌ಸಿಬಿ ಹೊರಗೆ ಬಿದ್ದಿದೆ.

ಆರ್.ಸಿ.ಬಿ. ಆಟಗಾರ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ. 61 ಎಸೆತಗಳಲ್ಲಿ ಅಜೇಯ 101 ರನ್ ಗಳಿಸಿದ ವಿರಾಟ್ ಕೊಹ್ಲಿ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ಆಟಗಾರ ಎಂಬ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅವರು ಐಪಿಎಲ್ ನಲ್ಲಿ 7ನೇ ಶತಕ ಪೂರೈಸಿದ್ದು, ಕ್ರಿಸ್ ಗೇಲ್ ಅವರ ಆರು ಶತಕದ ದಾಖಲೆಯನ್ನು ಹಿಂದಿಕ್ಕಿದ್ದಾರೆ. 2016ರಲ್ಲಿ ವಿರಾಟ್ ಕೊಹ್ಲಿ 4 ಶತಕ ಸಿಡಿಸಿದ್ದರು. 2019ರಲ್ಲಿ ಮತ್ತೊಂದು ಶತಕ ಬಾರಿಸಿದ್ದ ಅವರು ಈ ವರ್ಷ ಎರಡು ಶತಕ ಬಾರಿಸಿ ಕ್ರಿಸ್ ಗೇಲ್ ಹೆಸರಿನಲ್ಲಿದ್ದ 6 ಶತಕದ ದಾಖಲೆಯನ್ನು ಹಿಂದಿದ್ದಾರೆ.

ಜೋಸ್ ಬಟ್ಲರ್ 5, ವಾರ್ನರ್, ಶೇನ್ ವಾಟ್ಸನ್, ಕೆ.ಎಲ್. ರಾಹುಲ್ ತಲಾ 4 ಶತಕ ಬಾರಿಸಿದ್ದಾರೆ. ವಿರಾಟ್ ಕೊಹ್ಲಿ 4 ಶತಕಗಳನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿಡಿಸಿರುವುದು ವಿಶೇಷವಾಗಿದೆ.

2023ರ ಐಪಿಎಲ್ ಹಲವು ಹೊಸ ದಾಖಲೆಗಳಿಗೆ ಸಾಕ್ಷಿಯಾಗಿದ್ದು, ಟೂರ್ನಿಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಒಂದು ಆವೃತ್ತಿಯಲ್ಲಿ 11 ಶತಕಗಳು ದಾಖಲಾಗಿವೆ. 2018ರ ಆವೃತ್ತಿಯಲ್ಲಿ 8 ಶತಕ ದಾಖಲಾಗಿದ್ದವು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular