ಬೆಂಗಳೂರು: ವರುಣಾರ್ಭಟಕ್ಕೆ ಬೆಂಗಳೂರಿನ ಕೆ.ಆರ್. ಸರ್ಕಲ್ ಅಂಡರ್ ಪಾಸ್ ನಲ್ಲಿ ಕಾರು ಮುಳುಗಿ ಇನ್ಫೋಸಿಸ್ ಉದ್ಯೋಗಿ ಯುವತಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದೆ.
ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಅಂಡರ್ ಪಾಸ್ ನಲ್ಲಿ ನೀರು ತುಂಬಿಕೊಂಡಿದೆ. ನೀರು ಹೊರ ಹಾಕಲು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಯುವತಿ ಸಹೋದರ ಸಂದೀಪ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ 304ಎ ಅಡಿಯಲ್ಲಿ ಅಸಹಜ ಸಾವು ಎಂದು ಎಫ್ ಐ ಆರ್ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.