HomeKarnatakaBIG NEWS: ವರುಣಾರ್ಭಟಕ್ಕೆ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್ ಕಾರು ಮುಳುಗಡೆ

BIG NEWS: ವರುಣಾರ್ಭಟಕ್ಕೆ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್ ಕಾರು ಮುಳುಗಡೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ರಣಮಳೆಗೆ ಹಲವೆಡೆ ಅವಾಂತರಗಳು ಸೃಷ್ಟಿಯಾಗಿದ್ದು, ಹಿರಿಯ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಕಾರು ಕೂಡ ನೀರಿನಲ್ಲಿ ಮುಳುಗಡೆಯಾಗಿದೆ.

ಜಗ್ಗೇಶ್ ಅವರ ಬಿಎಂಡಬ್ಲ್ಯೂ ಕಾರು ನೀರಿನಲ್ಲಿ ಮುಳುಗಿದೆ. ರಿಪೇರಿ ಕಾರ್ಯ ಹಿನ್ನೆಲೆಯಲ್ಲಿ ಸ್ನೇಹಿತನ ಮನೆಯಲ್ಲಿ ಕಾರನ್ನು ನಿಲ್ಲಿಸಿದ್ದರು. ಸ್ನೇಹಿತ ಮುರುಳಿಯವರ ಮಲ್ಲೇಶ್ವರಂ ಮನೆಯ ಸೆಲ್ ನಲ್ಲಿ ಕಾರನ್ನು ನಿಲ್ಲಿಸಲಾಗಿತ್ತು. ಆದರೆ ಭಾರಿ ಮಳೆಯಿಂದಾಗಿ ಕಾರು ಮುಳುಗಡೆಯಾಗಿದೆ.

ನಿನ್ನೆ ಸುರಿದ ಭಾರಿ ಮಳೆಯಿಂದ ಮಲ್ಲೇಶ್ವರಂನ ಹಲವೆಡೆಗಳಲ್ಲಿ ಮನೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ಅವಾಂತರಗಳು ಸೃಷ್ಟಿಯಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular