2019 ರ ಲೋಕಸಭೆ ಚುನಾವಣೆಯು “ನಮ್ಮ ಸೈನಿಕರ ಶವಗಳ ಮೇಲೆ ನಡೆದಿತ್ತು” ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಅವರು ಮತ್ತೊಮ್ಮೆ ಪುಲ್ವಾಮಾ ದಾಳಿಯ ವಿಷಯದ ಬಗ್ಗೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪುಲ್ವಾಮಾ ದಾಳಿಯ ಬಗ್ಗೆ ತನಿಖೆಯಾಗಿದ್ದರೆ ಆಗಿನ ಗೃಹ ಸಚಿವರು ರಾಜೀನಾಮೆ ನೀಡಬೇಕಾಗಿತ್ತು ಎಂದಿದ್ದಾರೆ.
ಘಟನೆಯ ನಂತರ ದಾಳಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿಸಿದ್ದೆ ಆದರೆ ಅವರು ನನಗೆ ಮೌನವಾಗಿರಲು ಹೇಳಿದರು ಎಂದು ಸತ್ಯಪಾಲ್ ಮಲಿಕ್ ಹೇಳಿದ್ದಾರೆ.
ಪುಲ್ವಾಮಾ ದಾಳಿಯಲ್ಲಿ ಮೃತಪಟ್ಟ ಸೈನಿಕರ ದೇಹಗಳ ಮೇಲೆ 2019 ರ ಲೋಕಸಭಾ ಚುನಾವಣೆ ನಡೆಯಿತು. ಮತ್ತು ಆ ಬಗ್ಗೆ ಯಾವುದೇ ತನಿಖೆ ನಡೆಸಲಿಲ್ಲ. ಒಂದು ವೇಳೆ ತನಿಖೆ ನಡೆದಿದ್ದರೆ ಅಂದಿನ ಗೃಹ ಸಚಿವ ರಾಜನಾಥ್ ಸಿಂಗ್ ರಾಜೀನಾಮೆ ನೀಡಬೇಕಾಗುತ್ತಿತ್ತು. ಅನೇಕ ಅಧಿಕಾರಿಗಳು ಜೈಲು ಪಾಲಾಗುತ್ತಿದ್ದರು ಮತ್ತು ದೊಡ್ಡ ವಿವಾದ ಉಂಟಾಗುತ್ತಿತ್ತು ಎಂದಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಲಡಾಖ್ ಮತ್ತು ಜಮ್ಮು ಮತ್ತು ಕಾಶ್ಮೀರ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಮೊದಲು ಅವರು ರಾಜ್ಯಪಾಲರಾಗಿದ್ದ ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಧ್ವನಿಯೆತ್ತಿದ್ದರು.
2018ರ ಆಗಸ್ಟ್ 23 ಮತ್ತು 2019ರ ಅಕ್ಟೋಬರ್ 30ರ ನಡುವೆ ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲರಾಗಿದ್ದ ಅವಧಿಯಲ್ಲಿ ಎರಡು ಕಡತಗಳನ್ನು ತೆರವುಗೊಳಿಸಲು ತನಗೆ 300 ಕೋಟಿ ರೂಪಾಯಿ ಲಂಚದ ಆಮಿಷವೊಡ್ಡಲಾಗಿತ್ತು ಎಂದು ಮಲಿಕ್ ಹೇಳಿದ್ದರು.