ನಾಗ್ಪುರ-ಪುಣೆ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಬಸ್ಸೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಸಾವನ್ನಪ್ಪಿದ್ದು, 13 ಮಂದಿ ಗಾಯಗೊಂಡಿದ್ದಾರೆ.
ಮಹಾರಾಷ್ಟ್ರ ಬುಲ್ಧಾನ ಜಿಲ್ಲೆಯಲ್ಲಿ ಈ ದುರ್ಘಟನೆ ನಡೆದಿದೆ. ಪುಣೆಯಿಂದ ಬುಲ್ಧಾನಾದಲ್ಲಿರುವ ಮೆಹೆಕರ್‌ಗೆ ತೆರಳುತ್ತಿದ್ದ ಬಸ್ ವಿರುದ್ಧ ದಿಕ್ಕಿನಿಂದ ವೇಗವಾಗಿ ಬಂದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ಸ್ಥಳದಲ್ಲಿ ವಾಹನಗಳು ನಜ್ಜುಗುಜ್ಜಾಗಿ ಬಿದ್ದಿವೆ. ವಾಹನದಲ್ಲಿ ಸಿಲುಕಿ ನರಳಾಡುತ್ತಿದ್ದವರನ್ನ ರಕ್ಷಿಸಲು ಸ್ಥಳೀಯರು ವಿಂಡ್ ಶೀಲ್ಡ್ ಮತ್ತು ಕಿಟಕಿ ಗಾಜುಗಳನ್ನು ಒಡೆದು ಕೆಲವರನ್ನು ರಕ್ಷಿಸಿದ್ದಾರೆ. ಅಪಘಾತದ ಭೀಕರತೆಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿವೆ.