ಬೆಂಗಳೂರು: ವಿಧಾನಸೌಧದ ಮೊಗಸಾಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ನೂತನ ಶಾಸಕ ಬಿ.ವೈ. ವಿಜಯೇಂದ್ರ ಮುಖಾಮುಖಿಯಾಗಿದ್ದಾರೆ. ಈ ವೇಳೆ ವಿಜಯೇಂದ್ರ ಸಿದ್ದರಾಮಯ್ಯ ಅವರೊಂದಿಗೆ ಖುಷಿ ಖುಷಿಯಾಗಿ ನಗುತ್ತಲೇ ಮಾತನಾಡಿದ ಪ್ರಸಂಗ ನಡೆದಿದೆ.
ಶಿಕಾರಿಪುರ ಕ್ಷೇತ್ರದಿಂದ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಬಿ.ವೈ.ವಿಜಯೇಂದ್ರ ವಿಧಾನಸೌಧಕ್ಕೆ ಆಗಮಿಸಿದ್ದು, ಈ ವೇಳೆ ವಿಧಾನಸೌಧದ ಮೊಗಸಾಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ವಿಜಯೇಂದ್ರ ಎದುರಾಗಿದ್ದಾರೆ. ವಿಜಯೇಂದ್ರಗೆ ಸಿದ್ದರಾಮಯ್ಯ ಕೈ ಕುಲುಕಿ, ಬೆನ್ನು ತಟ್ಟಿ ಅಭಿನಿಂದಿಸಿದ್ದಾರೆ.
ಇದೇ ವೇಳೆ ಶಾಸಕ ಯು.ಟಿ.ಖಾದರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.