ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ಬಗ್ಗೆ ತನಿಖೆ ನಡೆಸುವುದಾಗಿ ಕಾಂಗ್ರೆಸ್ ಸರ್ಕಾರ ಹೇಳಿರುವ ವಿಚಾರವಾಗಿ ಮಾತನಾಡಿರುವ ಬಿಜೆಪಿ ನಾಯಕ ಸಿ.ಟಿ.ರವಿ, ಸರ್ಕಾರಕ್ಕೆ ತನಿಖೆ ನಡೆಸುವ ಪರಮಾಧಿಕಾರವಿದೆ ಎಂದು ಹೇಳಿದ್ದಾರೆ.
ಅಭಿವೃದ್ಧಿ ಯೋಜನೆಯಲ್ಲಿ ಅವ್ಯವಹಾರವಾಗಿದ್ದರೆ ತನಿಖೆ ನಡೆಸಲಿ ಎಂದರು. ಈಗ ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್ ಸರ್ಕಾರ ಅನುದಾನಕ್ಕೆ ತಡೆ ಹಿಡಿದಿದೆ. ಬಿಜೆಪಿ ಸರ್ಕಾರದ ಯೋಜನೆಗಳಿಗೆ ತಡೆ ನೀಡಿರುವುದು ಸರಿಯಲ್ಲ ಎಂದು ಕಿಡಿಕಾರಿದರು.
ಜನ ಮತ ಹಾಕಿ ಕೆಟ್ಟೆವು, ಮೋಸ ಹೋದೆವು ಎಂದು ಮಾತನಾಡುತ್ತಾರೆ. ಬಿಜೆಪಿ ಸರ್ಕಾರದ ಯೋಜೆಗಳಿಗೆ ತಡೆ ನೀಡಿರುವ ಕ್ರಮ ವಾಪಸ್ ಪಡೆಯಬೇಕು ಎಂದರು.
ಇನ್ನು ಶೀಘ್ರದಲ್ಲಿಯೇ ವಿಪಕ್ಷ ನಾಯಕನ ಆಯ್ಕೆ ನಡೆಯಲಿದೆ. ಶಾಸಕಾಂಗ ಸಭೆಯಲ್ಲಿ ವಿಪಕ್ಷ ನಾಯಕನ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದರು.