HomeKarnatakaBIG NEWS: ಮನೆ ಮೇಲೆ ಹಾದು ಹೋಗಿದ್ದ ವಿದ್ಯುತ್ ತಂತಿ ತಗುಲಿ ಬಾಲಕಿ ದುರ್ಮರಣ

BIG NEWS: ಮನೆ ಮೇಲೆ ಹಾದು ಹೋಗಿದ್ದ ವಿದ್ಯುತ್ ತಂತಿ ತಗುಲಿ ಬಾಲಕಿ ದುರ್ಮರಣ

ಬೆಳಗಾವಿ: ಮನೆ ಮೇಲೆ ಆಟವಾಡುತ್ತಿದ್ದ ಬಾಲಕಿ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ತಾಲೂಕಿನ ಮಚ್ಚೆ ಗ್ರಾಮದಲ್ಲಿ ನಡೆದಿದೆ.

13 ವರ್ಷದ ಮಧುರಾ ಕೇಶವ್ ಮೋರೆ ಮೃತ ಬಾಲಕಿ. ಖಾನಾಪುರ ತಾಲೂಕಿನ ಮಾಚಿಘಡ ಗ್ರಾಮದ ನಿವಾಸಿಯಾದ ಮಧುರಾ, ಶಾಲೆಗೆ ರಜೆ ಇರುವ ಹಿನ್ನೆಲೆಯಲ್ಲಿ ಸೋದರ ಮಾವನ ಮನೆಗೆ ಬಂದಿದ್ದಳು. ಈ ವೇಳೆ ಆಟವಾಡುತ್ತಿದ್ದಾಗ ಮನೆ ಮೇಲೆ ಹಾದು ಹೋಗಿದ್ದ ವಿದ್ಯುತ್ ತಂತಿ ಆಕಸ್ಮಿಕವಾಗಿ ಬಾಲಕಿಗೆ ತಗುಲಿ ಸ್ಥಳದಲ್ಲೇ ಬಾಲಕಿ ಮೃತಪಟ್ಟಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular