HomeKarnatakaBIG NEWS: ಕೇಂದ್ರ ನಾಯಕರ ತಂತ್ರಗಾರಿಕೆಯಿಂದ ರಾಜ್ಯದಲ್ಲಿ ಬಿಜೆಪಿ ಸೋತಿದೆ; ಮಾಜಿ ಶಾಸಕ ರೇಣುಕಾಚಾರ್ಯ ಅಸಮಾಧಾನ

BIG NEWS: ಕೇಂದ್ರ ನಾಯಕರ ತಂತ್ರಗಾರಿಕೆಯಿಂದ ರಾಜ್ಯದಲ್ಲಿ ಬಿಜೆಪಿ ಸೋತಿದೆ; ಮಾಜಿ ಶಾಸಕ ರೇಣುಕಾಚಾರ್ಯ ಅಸಮಾಧಾನ

ದಾವಣಗೆರೆ: ಒಳಮೀಸಲಾತಿಯಿಂದ 45 ಕ್ಷೇತ್ರಗಳಲ್ಲಿ ಬಿಜೆಪಿ ಸೋತಿದೆ ಎಂದು ಮಾಜಿ ಶಾಸಕ ರೇಣುಕಾಚಾರ್ಯ ತಿಳಿಸಿದ್ದಾರೆ.

ಆತ್ಮಾವಲೋಕನಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ ಎಂ.ಪಿ.ರೇಣುಕಾಚಾರ್ಯ, ಬಿಜೆಪಿ ಕೇಂದ್ರ ನಾಯಕರ ತಂತ್ರಗಾರಿಕೆಯೇ ಬಿಜೆಪಿ ಸೋಲಲು ಕಾರಣ ಎಂದಿದ್ದಾರೆ.

ಬಿಜೆಪಿ ಕೇಂದ್ರ ನಾಯಕರು 72 ಹೊಸಬರಿಗೆ ಟಿಕೆಟ್ ನೀಡಿದ್ದರು. 72 ಹೊಸಬರ ಪೈಕಿ 42 ಜನರು ಚುನಾವಣೆಯಲ್ಲಿ ಸೋತಿದ್ದಾರೆ. ಈ ತಂತ್ರಗಾರಿಕೆ ನಮ್ಮ ರಾಜ್ಯಕ್ಕಲ್ಲ. ಬೆಲೆ ಏರಿಕೆ ಸಂದರ್ಭದಲ್ಲಿ ಅಕ್ಕಿ ಕಡಿತ ಮಾಡಿದ್ದು ತಪ್ಪು. ಕಾಂಗ್ರೆಸ್ ನ ಗ್ಯಾರಂಟಿ ಕಾರ್ಡ್ ಬಿಜೆಪಿ ಸೋಲಿಗೆ ಕಾರಣವಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular