HomeKarnatakaBIG NEWS: ಇದು ಪೊಲೀಸ್ ಇಲಾಖೆಯ ಆತ್ಮಸ್ಥೈರ್ಯ ಕುಗ್ಗಿಸುವ ಮಾತು; ಡಿ.ಕೆ.ಶಿ. ವಿರುದ್ಧ ಕಿಡಿಕಾರಿದ ಮಾಜಿ...

BIG NEWS: ಇದು ಪೊಲೀಸ್ ಇಲಾಖೆಯ ಆತ್ಮಸ್ಥೈರ್ಯ ಕುಗ್ಗಿಸುವ ಮಾತು; ಡಿ.ಕೆ.ಶಿ. ವಿರುದ್ಧ ಕಿಡಿಕಾರಿದ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು; ಪೊಲೀಸ್ ಇಲಾಖೆಯನ್ನು ಕೇಸರೀಕರಣ ಮಾಡಲು ಹೊರಟಿದ್ದೀರಾ ಎಂಬ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಕಿಡಿ ಕಾರಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ನಮ್ಮ ಪೊಲೀಸ್ ಇಲಾಖೆ ದೇಶದಲ್ಲಿಯೇ ಹೆಸರುವಾಸಿಯಾಗಿದೆ. ಅವರ ಮೇಲೆ ಸಂಶಯ ಪಡುವ ರೀತಿಯಲ್ಲಿ ಡಿ.ಕೆ. ಶಿವಕುಮಾರ್ ಮಾತನಾಡಿದ್ದು ಸರಿಯಲ್ಲ. ನಮ್ಮ ಪೊಲೀಸರು ಯಾವತ್ತೂ ಕೇಸರಿಕರಣ ಮಾಡಿಲ್ಲ ಎಂದು ಗುಡುಗಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿಸಿಎಂ ಪೊಲೀಸ್ ಇಲಾಖೆಗೆ ಆತ್ಮಸ್ಥೈರ್ಯ ತುಂಬುವ ಬದಲು ಆತ್ಮಸ್ಥೈರ್ಯ ಕುಗ್ಗಿಸುವ ಮಾತುಗಳನ್ನಾಡಿದ್ದಾರೆ. ಕಾಂಗ್ರೆಸ್ ನವರು ತಮ್ಮ ಅಜೆಂಡಾ ಮುಂದುವರೆಸಲು ಹೇಳಿದ್ದಾರೆ. ಎಸ್ ಡಿ ಪಿ ಐ, ಪಿಎಫ್ಐ, ಸಮಾಜ ವಿರೋಧಿಗಳ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದು ಹೇಳಬೇಕಿತ್ತು. ಆದರೆ ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಪೊಲೀಸ್ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಒಳಗಾಗಬೇಡಿ. ನಿಸ್ಪಕ್ಷಪಾತವಾಗಿ, ನ್ಯಾಯಯುತವಾಗಿ ಕರ್ತವ್ಯ ನಿರ್ವಹಿಸಿ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular