HomeKarnatakaBIG NEWS: ಕಾಂಗ್ರೆಸ್ ನವರು ರಾಜ್ಯದಲ್ಲಿ ಆಡಳಿತಕ್ಕೆ ಬಂದ ಭ್ರಮೆಯಲ್ಲಿದ್ದಾರೆ; ಬಿ.ವೈ.ವಿಜಯೇಂದ್ರ ಲೇವಡಿ

BIG NEWS: ಕಾಂಗ್ರೆಸ್ ನವರು ರಾಜ್ಯದಲ್ಲಿ ಆಡಳಿತಕ್ಕೆ ಬಂದ ಭ್ರಮೆಯಲ್ಲಿದ್ದಾರೆ; ಬಿ.ವೈ.ವಿಜಯೇಂದ್ರ ಲೇವಡಿ

ಬೆಂಗಳೂರು: ಪೊಲೀಸರು ಕೇಸರಿ ಶಾಲು ಹಾಕಿದ್ದಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಶಾಸಕ ಬಿ.ವೈ. ವಿಜಯೇಂದ್ರ, ಕಾಂಗ್ರೆಸ್ ನಾಯಕರಿಗೆ ಕೇಸರಿ ಮೇಲೆ ಕೋಪ ಏಕೆ ಎಂಬುದೇ ಗೊತ್ತಾಗುತ್ತಿಲ್ಲ ಎಂದಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಬಿ.ವೈ. ವಿಜಯೇಂದ್ರ, ಭಾರತದ ತ್ರಿವರ್ಣ ಧ್ವಜ ಕೇಸರಿಯಿಂದಲೇ ಆರಂಭವಾಗುವುದು, ಹನುಮಾನ್ ಸಂಕೇತ ಕೇಸರಿ. ಸ್ವಾಮೀಜಿಗಳ ಸಂಕೇತ ಕೇಸರಿ. ಕಾಂಗ್ರೆಸ್ ನವರಿಗೆ ಯಾಕೆ ಕೇಸರಿ ಮೇಲೆ ಕೋಪ ? ಈ ರಾಜ್ಯದಲ್ಲಿ ಆಡಳಿತಕ್ಕೆ ಬಂದ ಭ್ರಮೆಯಲ್ಲಿ ಕಾಂಗ್ರೆಸ್ ನಾಯಕರು ಇದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಜನ ಇದಕ್ಕೆ ಉತ್ತರ ಕೊಡುತ್ತಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

5 ವರ್ಷ ಮುಖ್ಯಮಂತ್ರಿ ಇರುತ್ತಾರೆ ಎಂಬ ಗ್ಯಾರಂಟಿ ಇಲ್ಲ. ಈ ಬಗ್ಗೆ ಸಚಿವರುಗಳ ಹೆಳಿಕೆಯಿಂದಲೇ ಗೊತ್ತಾಗುತ್ತಿದೆ. ಚುನಾವಣೆಗೂ ಮೊದಲು ಒಂದು ಹೇಳಿಕೆ, ಚುನಾವಣೆ ಬಳಿಕ ಒಂದು ಹೇಳಿಕೆ ಕೊಡುತ್ತಿದ್ದಾರೆ. ಚುನಾವಣೆ ಗೆದ್ದ ಬಳಿಕ ಗ್ಯಾರಂಟಿಗಳಿಗೆ ಕಂಡಿಷನ್ ಹಾಕುತ್ತಿದ್ದಾರೆ. ಇದು ಡಬಲ್ ಸ್ಟೇರಿಂಗ್ ಸರ್ಕಾರ ಬಸ್ ಯಾವ ದಿಕ್ಕಿನಲ್ಲಿ ಸಾಗುತ್ತದೆ ದೇವರೇ ಕಾಪಾಡಬೇಕು ಎಂದು ವಾಗ್ದಾಳಿ ನಡೆಸಿದರು.

For Latest News Updates, Join Our Whatsapp Community🚩
RELATED ARTICLES

Most Popular