HomeKarnatakaಕಟ್ಟಡದಿಂದ ಬೆತ್ತಲೆ ಹಾರಿದ ವ್ಯಕ್ತಿ ಸಾವು: ಪೊಲೀಸರ ವಿರುದ್ಧ ಹಲ್ಲೆ ಆರೋಪ

ಕಟ್ಟಡದಿಂದ ಬೆತ್ತಲೆ ಹಾರಿದ ವ್ಯಕ್ತಿ ಸಾವು: ಪೊಲೀಸರ ವಿರುದ್ಧ ಹಲ್ಲೆ ಆರೋಪ

ಬೆಂಗಳೂರು: ಪೊಲೀಸರು ವಶಕ್ಕೆ ಪಡೆಯಲು ತೆರಳಿದ್ದ ವೇಳೆ ನಾಲ್ಕನೇ ಮಹಡಿಯಿಂದ ಜಿಗಿದು ವ್ಯಕ್ತಿ ಸಾವನ್ನಪ್ಪಿದ್ದಾನೆ.

ಮೊಹಮ್ಮದ್ ಹುಸೇನ್(31) ಸಾವನ್ನಪ್ಪಿದ ವ್ಯಕ್ತಿ ಎಂದು ಹೇಳಲಾಗಿದೆ. ಬೆಂಗಳೂರಿನ ಬೊಮ್ಮನಹಳ್ಳಿಯ ಬೇಗೂರು ರಸ್ತೆಯಲ್ಲಿ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹುಸೇನ್ ನನ್ನು ವಶಕ್ಕೆ ಪಡೆಯಲು ಹೋಗಿದ್ದ ವೇಳೆ ಕಟ್ಟಡದಿಂದ ಹಾರಿದ್ದಾನೆ. ನಾಲ್ಕನೇ ಮಹಡಿಯಲ್ಲಿ ವಶಕ್ಕೆ ಪಡೆಯುವಾಗ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ. ಬೆತ್ತಲೆಯಾಗಿ ಮಹಡಿಯಿಂದ ಬಿದ್ದು ಹುಸೇನ್ ಮೃತಪಟ್ಟಿದ್ದಾನೆ. ವಶಕ್ಕೆ ಪಡೆಯಲು ಬಂದಿದ್ದ ಪೊಲೀಸರು ಹಲ್ಲೆ ನಡೆಸಿರುವುದಾಗಿ ಪೊಲೀಸ್ ಸಿಬ್ಬಂದಿ ವಿರುದ್ಧ ಹುಸೇನ್ ಕುಟುಂಬಸ್ಥರು ಆರೋಪಿಸಿದ್ದಾರೆ. ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular