HomeKarnatakaಇಂದಿರಾ ಕ್ಯಾಂಟೀನ್ ಗ್ರಾಹಕರಿಗೆ ಗುಡ್ ನ್ಯೂಸ್: ಊಟದ ಮೆನುವಿನಲ್ಲಿ ರಾಗಿಮುದ್ದೆ, ಚಪಾತಿ

ಇಂದಿರಾ ಕ್ಯಾಂಟೀನ್ ಗ್ರಾಹಕರಿಗೆ ಗುಡ್ ನ್ಯೂಸ್: ಊಟದ ಮೆನುವಿನಲ್ಲಿ ರಾಗಿಮುದ್ದೆ, ಚಪಾತಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಇಂದಿರಾ ಕ್ಯಾಂಟೀನ್ ಆಕರ್ಷಣೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ.

ಊಟದ ಮೆನುವಿನಲ್ಲಿ ರಾಗಿ ಮುದ್ದೆ, ಚಪಾತಿ, ಸಾಗು ಪರಿಚಯಿಸಲು ಚಿಂತನೆ ನಡೆಸಲಾಗಿದೆ. ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಲಾಗಿತ್ತು. ಐದು ರೂಪಾಯಿಗೆ ಊಟ, ತಿಂಡಿ ಸಿಗುತ್ತಿದ್ದು, ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಅನುಕೂಲವಾಗಿತ್ತು. ಇತ್ತೀಚಿನ ವರ್ಷಗಳಲ್ಲಿ ಕಳೆಗುಂದಿ ಆಕರ್ಷಣೆ ಕಳೆದುಕೊಂಡಿದ್ದ ಇಂದಿರಾ ಕ್ಯಾಂಟೀನ್ ಗಳಿಗೆ ಚೈತನ್ಯ ನೀಡಲು ಕಾಂಗ್ರೆಸ್ ಸರ್ಕಾರ ಕ್ರಮ ಕೈಗೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಧಿಕಾರಿಗಳ ತಂಡ ಸರ್ಕಾರಕ್ಕೆ ಸಲಹೆ ನೀಡಿದ್ದು, ಜನರ ಅನುಕೂಲಕ್ಕಾಗಿ ಇಂದಿರಾ ಕ್ಯಾಂಟೀನ್ ಗಳ ಬಗ್ಗೆ ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿಪಡಿಸಿ ಸಮೀಪದಲ್ಲಿರುವ ಇಂದಿರಾ ಕ್ಯಾಂಟೀನ್, ಆಹಾರದ ಮೆನು ಸೇರಿ ಎಲ್ಲಾ ಮಾಹಿತಿಗಳನ್ನು ನೀಡಬೇಕು ಎಂದು ಸಲಹೆ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular