
ಇದೇ ವಿಚಾರವಾಗಿ ಹೈಕಮಾಂಡ್ ನಾಯಕರ ಜೊತೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ. ಇಂದೇ ಸಂಪುಟ ವಿಸ್ತರಣೆ ವಿಚಾರ ಫೈನಲ್ ಆಗುವ ಸಾಧ್ಯತೆ ಇದೆ.
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಸಚಿವ ಎಂ.ಬಿ. ಪಾಟೀಲ್, ಸಂಪುಟ ವಿಸ್ತರಣೆ ಸುಸೂತ್ರವಾಗಿ ನಡೆಯಲಿದೆ. ಪ್ರಾದೇಶಿಕವಾರು, ಸಮುದಾಯವಾರು ಪ್ರಾತಿನಿಧ್ಯ ದೊರೆಯಬಹುದು. ಸಿಎಂ, ಡಿಸಿಎಂ, ಎಐಸಿಸಿ ಅಧ್ಯಕ್ಷರು ಚರ್ಚಿಸಿ ಫೈನಲ್ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.

