
ಬೆಂಗಳೂರು ಗ್ರಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಮುತ್ಯಾಲಮ್ಮ ಜಾತ್ರೆಗೆ ಬಂದಿದ್ದ 9 ವರ್ಷದ ಬಾಲಕ ಆಟವಾಡುತ್ತಿದ್ದಾಗ ಏಕಾಏಕಿ ಕುಸಿದು ಬಿದ್ದಿದ್ದಾನೆ. ಹೃದಯಾಘಾತದಿಂದ ಬಾಲಕ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
9 ವರ್ಷದ ಶ್ರೇಯಸ್ ಮೃತ ಬಾಲಕ. ದೊಡ್ಡಬಳ್ಳಾಪುರದ ಶಾಂತಿನಗರದ ಮಂಜುನಾಥ್ ಪುತ್ರ. ದೊಡ್ಡಬಳ್ಳಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

