HomeKarnatakaBIG NEWS: ಪೂರ್ಣ ಪ್ರಮಾಣದ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಒಲವು

BIG NEWS: ಪೂರ್ಣ ಪ್ರಮಾಣದ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಒಲವು

ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆ ನಿಟ್ಟಿನಲ್ಲಿ ದೆಹಲಿಯಲ್ಲಿ ಹೈಕಮಾಂಡ್ ಮಟ್ಟದಲ್ಲಿ ಕಸರತ್ತು ನಡೆದಿದ್ದು, ಪೂರ್ಣ ಪ್ರಮಾಣದ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಒಲವು ಹೊಂದಿದೆ.

ಈಗಾಗಲೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ 10 ಜನರು ಸಚಿವರಿದ್ದು, 20 ಶಾಸಕರಿಗೆ ಸಚಿವ ಸ್ಥಾನ ನೀಡಲು ವರಿಷ್ಠರು ಚಿಂತನೆ ನಡೆಸಿದ್ದಾರೆ.

ಪ್ರತ್ಯೇಕವಾಗಿ ಸಂಪುಟ ವಿಸ್ತರಣೆ ಮಾಡಿದರೆ ಮತ್ತೆ ಗೊಂದಲ ಸೃಷ್ಟಿಯಾಗುತ್ತದೆ. ಪದೇ ಪದೇ ಗೊಂದಲ ಸೃಷ್ಟಿಯಾದರೆ ಅಧಿಕಾರ ನಡೆಸುವುದು ಕಷ್ಟಕರ. ಹಾಗಾಗಿ ಪೂರ್ಣಪ್ರಮಾಣದಲ್ಲಿ ಸಂಪುಟ ವಿಸ್ತರಣೆ ನಿಟ್ಟಿನಲ್ಲಿ ಹೈಕಮಾಂಡ್ ಚರ್ಚೆ ನಡೆಸಿದೆ ಎಂದು ಹೇಳಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular