ಆಧಾರ್ ಕಾರ್ಡ್ ಅಪ್ಡೇಟ್ ಮಾಡಲು ಬಯಸುವವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಆನ್ಲೈನ್ ಮೂಲಕ ಫೋಟೋ ಸೇರಿದಂತೆ ಇತರೆ ಮಾಹಿತಿಗಳನ್ನು ಅಪ್ಡೇಟ್ ಮಾಡಲು ಜೂನ್ 14ರ ವರೆಗೆ ಉಚಿತ ಅವಕಾಶ ಕಲ್ಪಿಸಿಕೊಡಲಾಗಿದೆ.
10 ವರ್ಷಕ್ಕಿಂತ ಹಳೆಯದಾದ ಆಧಾರ್ ಕಾರ್ಡ್ ನಲ್ಲಿ ತಮ್ಮ ಫೋಟೋ ಮತ್ತು ಇತರ ಮಾಹಿತಿಯನ್ನು ಅಪ್ಡೇಟ್ ಮಾಡಲು ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ ಈ ಅವಕಾಶ ಕಲ್ಪಿಸಿ ಕೊಟ್ಟಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಈ ಮೊದಲು ಆಧಾರ್ ನಲ್ಲಿ ತಮ್ಮ ಹೆಸರು, ಲಿಂಗ, ಫೋಟೋ, ಮೊಬೈಲ್ ಸಂಖ್ಯೆ ಸೇರಿದಂತೆ ಇತರೆ ಮಾಹಿತಿಗಳನ್ನು ಅಪ್ಡೇಟ್ ಮಾಡಲು 50 ರೂಪಾಯಿ ಶುಲ್ಕವನ್ನು ಪಾವತಿಸಬೇಕಿತ್ತು. ಇದೀಗ ಈ ಸೌಲಭ್ಯ ಜೂನ್ 14ರವರೆಗೆ ಉಚಿತವಾಗಿ ಲಭ್ಯವಿದೆ. ಇನ್ನು ಆಧಾರ್ ಕೇಂದ್ರಕ್ಕೆ ತೆರಳಿ ಈ ಮಾಹಿತಿಗಳನ್ನು ಅಪ್ಡೇಟ್ ಮಾಡಲು ಮೊದಲಿನಂತೆಯೇ 50 ರೂಪಾಯಿ ಶುಲ್ಕ ಪಾವತಿಸಬೇಕಾಗುತ್ತದೆ.