HomeKarnatakaBIG NEWS: ಈ ಸರ್ಕಾರದಲ್ಲಿ ಸಿಎಂ ಸೈಲೆಂಟ್. ಡಿಸಿಎಂ ವೈಲೆಂಟ್ ಆಗಿದ್ದಾರೆ; ಡಿ.ಕೆ. ಶಿವಕುಮಾರ್ ವಿರುದ್ಧ...

BIG NEWS: ಈ ಸರ್ಕಾರದಲ್ಲಿ ಸಿಎಂ ಸೈಲೆಂಟ್. ಡಿಸಿಎಂ ವೈಲೆಂಟ್ ಆಗಿದ್ದಾರೆ; ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ರಾಜ್ಯದಲ್ಲಿ ಡಬಲ್ ಸ್ಟೇರಿಂಗ್ ಸರ್ಕಾರ ಬಂದಿದೆ ಸಿಎಂ ಸೈಲೆಂಟ್ ಆಗಿದ್ದಾರೆ. ಡಿಸಿಎಂ ವೈಲೆಂಟ್ ಆಗಿದ್ದಾರೆ ಎಂದು ಮಾಜಿ ಸಚಿವ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್. ಅಶೋಕ್, ಪ್ರತಿ ಸಭೆಯಲ್ಲಿಯೂ ಸಿಎಂಗಿಂತಲೂ ಡಿಸಿಎಂ ಮೊದಲು ಮಾತಾಡ್ತಾರೆ. ಈ ಸರ್ಕಾರದಲ್ಲಿ ಸಿಎಂ ಸೈಲೆಂಟ್. ಡಿಸಿಎಂ ವೈಲೆಂಟ್ ಆಗಿದ್ದಾರೆ. ಪೊಲೀಸರು, ಹಿಂದೂ ಸಂಘಟನೆಗಳಿಗೆ ಡಿಸಿಎಂ ಧಮ್ಕಿ ಹಾಕಿದ್ದಾರೆ ಎಂದು ಕಿಡಿಕಾರಿದರು.

ಇನ್ನೂ ಗ್ಯಾರಂಟಿ ಯೋಜನೆಗಳನ್ನು ಸರ್ಕಾರ ಜಾರಿ ಮಾಡಿಲ್ಲ. ಇದು ರಾಜ್ಯದ ಜನರಿಗೆ ಕಾಂಗ್ರೆಸ್ ಸರ್ಕಾರ ಮಾಡಿರುವ ಮೋಸ. ರಾಹುಲ್, ಪ್ರಿಯಾಂಕಾ ಬಂದು ಗ್ಯಾರಂಟಿ ಘೋಷಣೆ ಮಾಡಿದರು. ಮೊದಲ ಸಂಪುಟದಲ್ಲೇ ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದರು. ಗ್ಯಾರಂಟಿ ಲ್ಕಾರ್ಡ್ ಗೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸಹಿ ಹಾಕಿ ಕೊಟ್ರು. ದಾರಿಯಲ್ಲಿ ಹೋಗುವವರಿಗೂ ಗ್ಯಾರಂಟಿ ಕಾರ್ಡ್ ಕೊಟ್ಟರು. ಈವರೆಗೂ ಯೋಜನೆ ಜಾರಿಯಾಗಿಲ್ಲ ಎಂದು ವಾಗ್ದಾಳಿ ನಡೆಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular