HomeKarnatakaBIG NEWS: 10 ಜನ ಹೊಸಬರಿಗೆ ಸಂಪುಟದಲ್ಲಿ ಅವಕಾಶ ನೀಡಬೇಕು; ಪಕ್ಷ ಸಂಘಟನೆ ದೃಷ್ಟಿಯಿಂದ ಅಗತ್ಯ...

BIG NEWS: 10 ಜನ ಹೊಸಬರಿಗೆ ಸಂಪುಟದಲ್ಲಿ ಅವಕಾಶ ನೀಡಬೇಕು; ಪಕ್ಷ ಸಂಘಟನೆ ದೃಷ್ಟಿಯಿಂದ ಅಗತ್ಯ ಎಂದ ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು: ನಾಳೆ ಬೆಳಿಗ್ಗೆ 11 ಗಂಟೆಗೆ ನೂತನ ಸಚಿವರ ಪ್ರಮಾಣವಚನ ನಡೆಯಲಿದೆ. ಯಾರಿಗೆ ಸಚಿವ ಸ್ಥಾನ ಎಂಬುದು ಪಟ್ಟಿ ಬಿಡುಗಡೆ ಬಳಿಕ ಗೊತ್ತಾಗಲಿದೆ ಎಂದು ನೂತನ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ದೆಹಲಿಯಿಂದ ಬೆಂಗಳೂರಿಗೆ ವಾಪಸ್ ಆಗಿರುವ ಸತೀಶ್ ಜಾರಕಿಹೊಳಿ, ಪಕ್ಷ ಸಂಘಟನೆ ದೃಷ್ಟಿಯಿಂದ ಹೊಸಬರಿಗೆ ಅವಕಾಶ ನೀಡಬೇಕು. ಕನಿಷ್ಠ 10 ಹೊಸಬರಿಗೆ ಅವಕಾಶ ನೀಡಬೇಕು ಅಂತ ಹೇಳಿದ್ದೇನೆ. ಅದೇ ರೀತಿ ಈ ಬಾರಿ ಹೊಸಬರಿಗೆ ಅವಕಾಶ ಕೊಡುತ್ತಾರೆ ಎಂದರು.

ಅಲ್ಲದೇ 1-2 ತಿಂಗಳಲ್ಲಿ ನಿಗಮ ಮಂಡಳಿ ಸ್ಥಾನ ಸಹ ಭರ್ತಿಯಾಗುತ್ತದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular