ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ ಆನ್ಲೈನ್ ಮೂಲಕ ಸಾರ್ವಜನಿಕರು ತಮ್ಮ ‘ಆಧಾರ್’ ನಲ್ಲಿ ಕೆಲವೊಂದು ಮಾಹಿತಿಗಳನ್ನು ಉಚಿತವಾಗಿ ಅಪ್ಡೇಟ್ ಮಾಡಲು ಜೂನ್ 14ರವರೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ವರದಿಯಾಗಿತ್ತು. ಈ ಕುರಿತಂತೆ ಸ್ಪಷ್ಟನೆಯೊಂದು ಇಲ್ಲಿದೆ.
ಹತ್ತು ವರ್ಷಗಳಿಂದ ವಿಳಾಸ ಮತ್ತು ಗುರುತಿನ ದಾಖಲೆಗಳನ್ನು ಅಪ್ಡೇಟ್ ಮಾಡದವರಿಗಷ್ಟೇ ಈ ಉಚಿತ ಸೌಲಭ್ಯದ ಅವಕಾಶ ಸಿಗಲಿದೆ ಎಂದು ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ತಿಳಿಸಿದೆ.
ಇನ್ನುಳಿದಂತೆ ಹೆಸರು, ಲಿಂಗ, ಜನ್ಮ ದಿನಾಂಕ, ಫೋಟೋ, ಮೊಬೈಲ್ ಸಂಖ್ಯೆ ಹಾಗೂ ಬಯೋಮೆಟ್ರಿಕ್ ವಿವರಗಳನ್ನು ಪರಿಷ್ಕರಿಸಲು ಸಮೀಪದ ಆಧಾರ್ ಕೇಂದ್ರಕ್ಕೆ ತೆರಳಬೇಕಿದ್ದು, ಇವುಗಳನ್ನು ಆನ್ಲೈನ್ ಮೂಲಕ ಮಾಡಲು ಸಾಧ್ಯವಿರುವುದಿಲ್ಲ. ಹೀಗಾಗಿ ಇದಕ್ಕೆ ನಿಗದಿಪಡಿಸಿದ 50 ರೂಪಾಯಿ ಶುಲ್ಕವನ್ನು ಪಾವತಿಸಬೇಕಿದೆ ಎಂದು ಸ್ಪಷ್ಟಪಡಿಸಲಾಗಿದೆ.