HomeKarnatakaರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ: ವಿವಾಹಿತೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ

ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ: ವಿವಾಹಿತೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ

ರಾಯಚೂರು: ವಿವಾಹಿತೆ ಮೇಲೆ ನಾಲ್ವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದು, ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದೆ.

ಸಿಂಧನೂರು ತಾಲೂಕಿನ ಮೂರುಮೈಲ್ ಕ್ಯಾಂಪ್ ನಿವಾಸಿ ಮಾಳಪ್ಪ ಗೌಡಪ್ಪ ಎಂಬುವನನ್ನು ಬಂಧಿಸಲಾಗಿದೆ. ಮೇ 24 ರಂದು ಸಂಜೆ ನಾಲ್ಕುಮೈಲ್ ಕ್ಯಾಂಪಿನ ಹೊರವಲಯದಲ್ಲಿ 46 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ವಿರೋಧ ವ್ಯಕ್ತಪಡಿಸಿದ ಮಹಿಳೆ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮನಸೋ ಇಚ್ಛೆ ಹಲ್ಲೆ ನಡೆಸಿದ್ದರಿಂದ ಮಹಿಳೆ ತೀವ್ರ ಅಸ್ವಸ್ಥರಾಗಿದ್ದಾರೆ. ಆಕೆಯನ್ನು ಗಮನಿಸಿದ ಜನ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆ.

ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿ ಮಾಳಪ್ಪನನ್ನು ಬಂಧಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular