ನವದೆಹಲಿ: ರೈತರ ಜೀವನಾಡಿ ಎಂದೇ ಹೇಳಲಾಗುವ ಮುಂಗಾರು ಮಳೆ ಕುರಿತಾಗಿ ಹವಾಮಾನ ಇಲಾಖೆ ಸಿಹಿ ಸುದ್ದಿ ನೀಡಿದೆ.
ಈಗಾಗಲೇ ರಾಜ್ಯದ ಬಹುತೇಕ ಭಾಗದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಈ ಬಾರಿ ವಾಡಿಕೆಯ ಮುಂಗಾರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದೇಶದಲ್ಲಿ ಒಟ್ಟಾರೆ ಶೇಕಡ 96 ರಷ್ಟು ಮುಂಗಾರು ಮಳೆ ಆಗಲಿದೆ. ಈ ಬಾರಿ ವಾಯುವ್ಯ ಭಾಗದಲ್ಲಿ ಮಳೆ ಕೊರತೆ ಉಂಟಾಗುವ ಸಾಧ್ಯತೆಯಿದ್ದು ಶೇಕಡ 92 ಕ್ಕಿಂತಲೂ ಕಡಿಮೆ ಪ್ರಮಾಣದ ಮಳೆ ಆಗುವ ಸಂಭವ ಇದೆ.
ಬಹುತೇಕ ರೈತರು ಈಗಾಗಲೇ ಹೊಲ ಉಳುಮೆ ಮಾಡಿಕೊಂಡು ಬಿತ್ತನೆಗೆ ಸಿದ್ಧವಾಗಿದ್ದಾರೆ, ಬೀಜ, ಗೊಬ್ಬರ ಖರೀದಿಯಲ್ಲಿ ತೊಡಗಿದ್ದಾರೆ. ಮುಂಗಾರು ಆಗಮನವಾಗುತ್ತಿದ್ದಂತೆ ಬಿತ್ತನೆ ಕಾರ್ಯ ಚುರುಕಾಗಲಿದೆ. ಈ ಬಾರಿ ವಾಡಿಕೆಯ ಮುಂಗಾರು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದು ರೈತರಲ್ಲಿ ಹರ್ಷ ತಂದಿದೆ.